ಶಿಂಧೆ ಬಣದ 22ಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ..?

Social Share

ಮುಂಬೈ,ಅ.24- ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ 22ಕ್ಕೂ ಹೆಚ್ಚು ಶಾಸಕರು ಅಸಮಾಧಾನಗೊಂಡಿದ್ದು, ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.

ಇತ್ತೀಚೆಗೆ ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಶಾಸಕರು ಶಿವಸೇನೆಯಿಂದ ಚದುರಿ ಹೋಗಿದ್ದರು. ಈ ಮೂಲಕ ಶಿವಸೇನೆ ಕಾಂಗ್ರೆಸ್, ಎನ್‍ಸಿಪಿ ನೇತೃತ್ವದ ಮಹಾವಿಕಾಸ ಅಘಾಡಿ ಸರ್ಕಾರ ಪತನವಾಗಿತ್ತು. ಬಿಜೆಪಿ ಶಿವಸೇನೆಯ ಭಿನ್ನರ ಗುಂಪು ಮೈತ್ರಿಯಲ್ಲಿ ನೂತನ ಸರ್ಕಾರ ರಚನೆಯಾಗಿದೆ. ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಉಪಮುಖ್ಯಮಂತ್ರಿಯಾಗಿದ್ದಾರೆ.

ನಾಲ್ಕೈದು ತಿಂಗಳ ಬಳಿಕ ಸಾಮ್ನಾದಲ್ಲಿ ಮತ್ತೆ ರಾಜಕೀಯ ವಿಷಯವನ್ನು ಪ್ರಸ್ತಾಪಿಸಲಾಗಿದೆ. ಏಕನಾಥ್ ಶಿಂಧೆ ಬಣದಲ್ಲಿದ್ದ 40 ಶಾಸಕರ ಪೈಕಿ 22 ಮಂದಿ ಅಸಮಾಧಾನಗೊಂಡಿದ್ದಾರೆ. ಶೀಘ್ರದಲ್ಲೇ ಅವರು ಬಿಜೆಪಿ ಸೇರಲಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಎಂಬುದು ತಾತ್ಕಾಲಿಕ ವ್ಯವಸ್ಥೆಯಾಗಿದೆ. ಈಗ ಎಲ್ಲರಿಗೂ ಅರ್ಥವಾಗುತ್ತಿದ್ದು, ಮುಖ್ಯಮಂತ್ರಿ ಸಮವಸ್ತ್ರ ಯಾವಾಗ ಬೇಕಾದರೂ ತೆಗೆದಿಡಬಹುದಾಗಿದೆ ಎಂದು ಬರೆಯಲಾಗಿದೆ.

ಇತ್ತೀಚೆಗೆ ಅಂಧೇರಿಯ ಪೂರ್ವ ಉಪಚುನಾವಣೆಯಲ್ಲಿ ಶಿಂಧೆ ಬಣ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕಿತ್ತು. ಆದರೆ ಬಿಜೆಪಿ ಅದನ್ನು ತಡೆದಿದೆ. ಶಿಂಧೆ ಬಣ ಇತ್ತೀಚೆಗೆ ನಡೆದ ಗ್ರಾಮಪಂಚಾಯ್ತಿ ಮತ್ತು ಸರಪಂಚ್ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದಿರುವುದಾಗಿ ಹೇಳಿಕೊಂಡಿತ್ತು. ಆದರೆ ಇದು ಸುಳ್ಳು ಮಾಹಿತಿ ಎಂದು ಅರ್ಥ ಮಾಡಿಕೊಂಡ ಶಾಸಕರು ಅಸಮಾಧಾನಗೊಂಡಿದ್ದಾರೆ. ಶೀಘ್ರವೇ ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದ್ದಾರೆ.

ಕಂಚಗಲ್ಲು ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ

ಏಕನಾಥ್ ಶಿಂಧೆ ಮಹಾರಾಷ್ಟ್ರದ ಭಾರೀ ನಷ್ಟಕ್ಕೆ ಕಾರಣವಾಗಲಿದ್ದು, ರಾಜ್ಯದ ಜನ ಅವನನ್ನು ಕ್ಷಮಿಸುವುದಿಲ್ಲ. ಬಿಜೆಪಿಯವರು ತಮ್ಮ ಲಾಭಕ್ಕಾಗಿ ಶಿಂಧೆಯನ್ನು ಬಳಸಿಕೊಳ್ಳುವುದನ್ನು ಮುಂದುವರೆಸಲಿದ್ದಾರೆ.

ಮುಖ್ಯಮಂತ್ರಿ ಕಚೇರಿ ಮೇಲೆ ಶಿಂಧೆ ಅವರಿಗೆ ಯಾವುದೇ ನಿಯಂತ್ರಣವಿಲ್ಲ. ಎಲ್ಲ ನಿರ್ಣಯಗಳನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

Articles You Might Like

Share This Article