ಛತ್ರಪತಿ ಸಂಭಾಜಿನಗರ, ನ.15 (ಪಿಟಿಐ) ಮರಾಠ ಮೀಸಲಾತಿ ಹೋರಾಟಕ್ಕೆ ಮೊದಲ ಬಲಿಯಾಗಿದೆ.ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ ಮೀಸಲಾತಿ ವಿಚಾರವಾಗಿ 23 ವರ್ಷದ ಮರಾಠಾ ಸಮುದಾಯದ ವ್ಯಕ್ತಿಯೊಬ್ಬ ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮರ್ಲಾಕ್ ಗ್ರಾಮದ ನಿವಾಸಿ ದಾಜಿಬಾ ರಾಮದಾಸ್ ಕದಮ್ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ.ಅವರು ಯಾವುದೋ ಕೆಲಸಕ್ಕಾಗಿ ನಗರಕ್ಕೆ ಬಂದಿದ್ದರು ಮತ್ತು ನವೆಂಬರ್ 11 ರಂದು ಝೆಂಡಾ ಚೌಕ್ ಪ್ರದೇಶದಲ್ಲಿ ವಿಷಕಾರಿ ಪದಾರ್ಥವನ್ನು ಸೇವಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ದಾಜಿಬಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತನ ಸಂಬಂಕರಿಗೆ ಮಾಹಿತಿ ನೀಡಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸಹಾರಾ ಗ್ರೂಪ್‍ನ ಸಂಸ್ಥಾಪಕ ಸುಬ್ರತಾ ರಾಯ್ ನಿಧನ
ಪೊಲೀಸರಿಗೆ ವ್ಯಕ್ತಿಯ ಬಳಿ ಚೀಟಿ ಸಿಕ್ಕಿದ್ದು, ಅದರಲ್ಲಿ ಇದು ನನಗೆ ಸರ್ಕಾರಿ ಉದ್ಯೋಗದ ಪ್ರಶ್ನೆ. ಏಕ್ ಮರಾಠಾ, ಲಕ್ಷ ಮರಾಠಾ ಎಂದು ಬರೆದುಕೊಂಡಿದ್ದರು ಎಂದು ಅಕಾರಿ ಹೇಳಿದರು.ಭಾಗ್ಯನಗರ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ವರದಿ ದಾಖಲಾಗಿದೆ ಎಂದರು. ಮಹಾರಾಷ್ಟ್ರದಲ್ಲಿ ಶೇಕಡಾ 30 ಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಮರಾಠರು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಗೆ ಒತ್ತಾಯಿಸುತ್ತಿದ್ದಾರೆ.
ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಡಿಸೆಂಬರ್ 24 ರೊಳಗೆ ಮೀಸಲಾತಿ ಘೋಷಿಸಲು ರಾಜ್ಯ ಸರ್ಕಾರಕ್ಕೆ ಹೊಸ ಗಡುವು ನೀಡಿದ್ದು, ಮರಾಠ ಯುವಕರು ಮೀಸಲಾತಿಗಾಗಿ ಶಾಂತಿಯುತವಾಗಿ ಹೋರಾಡಬೇಕು ಮತ್ತು ತೀವ್ರವಾದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಅವರು ಮನವಿ ಮಾಡಿದರು.