Monday, September 16, 2024
Homeಜಿಲ್ಲಾ ಸುದ್ದಿಗಳು | District Newsತುಮಕೂರು | Tumakuruಬೀಗರ ಬಾಡೂಟ ಸೇವಿಸಿದ್ದ 24 ಜನ ವಾಂತಿ, ಭೇದಿಯಿಂದ ಅಸ್ವಸ್ಥ

ಬೀಗರ ಬಾಡೂಟ ಸೇವಿಸಿದ್ದ 24 ಜನ ವಾಂತಿ, ಭೇದಿಯಿಂದ ಅಸ್ವಸ್ಥ

ತುಮಕೂರು,ಆ,21: ಬೀಗರೂಟದಲ್ಲಿ ಬಾಡೂಟ ಸೇವಿಸಿ ಗ್ರಾಮಕ್ಕೆ ಮರಳಿದ್ದ ಸುಮಾರು 24 ಜನರಿಗೆ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆ ಪಾವಗಡ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ನಡೆದಿದೆ.
ಅಸ್ವಸ್ಥಗೊಂಡವರು ಬೆಂಗಳೂರು ಸೇರಿ ಪಾವಗಡ, ಹಿಂದೂಪುರ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಆ.14 ಮತ್ತು 15ರಂದು ಪಾವಗಡ ತಾಲೂಕಿನ ನಾಗೇನಹಳ್ಳಿ ತಾಂಡಾದಲ್ಲಿ ಮದುವೆ ನಡೆದಿತ್ತು. ಮರು ದಿನ ಆ.16ರಂದು ಶ್ರೀರಂಗಪುರ ತಾಂಡಾದಲ್ಲಿ ಬೀಗರ ಊಟ ಆಯೋಜಿಸಲಾಗಿತ್ತು. ಊಟ ಮಾಡಿ ವಾಪಸ್‌‍ ತೆರಳಿದ ನಾಗೇನಹಳ್ಳಿ ತಾಂಡಾದ ಜನರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ.

24 ಮಂದಿ ವಾಂತಿ, ಭೇದಿಯಾಗಿ ಅಸ್ವಸ್ಥರಾಗಿದ್ದಾರೆ. ಕಳ್ಳಬಟ್ಟಿ ಸೇವನೆಯಿಂದಲೇ ಹೀಗಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.ಅಸ್ವಸ್ಥಗೊಂಡವರು ಹೊಟ್ಟೆ ನೋವು, ಭೇದಿಯಾಗಿ ಮರುದಿನ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾಗೇನಹಳ್ಳಿ ತಾಂಡಾಗೆ ಉಪವಿಭಾಗಧಿಕಾರಿ ತಹಶೀಲ್ದಾರ್‌ , ಡಿಎಚ್‌ಓ ಸೇರಿದಂತೆ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದದೆ. ಸದ್ಯ ಕಾರ್ಯಕ್ರಮದಲ್ಲಿ ನೀಡಿದ ನೀರು, ಊಟದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆದಿದೆ

RELATED ARTICLES

Latest News