Monday, February 26, 2024
Homeರಾಷ್ಟ್ರೀಯಗುಜರಾತ್‍ನ ಸೂರತ್‌ನ ರಾಸಾಯನಿಕ ಘಟಕದಲ್ಲಿ ಸ್ಫೋಟ

ಗುಜರಾತ್‍ನ ಸೂರತ್‌ನ ರಾಸಾಯನಿಕ ಘಟಕದಲ್ಲಿ ಸ್ಫೋಟ

ಸೂರತ್,ನ.29- ಗುಜರಾತ್‍ನ ಸೂರತ್ ನಗರದಲ್ಲಿರುವ ರಾಸಾಯನಿಕ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, 24 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಚಿನ್ ಜಿಐಡಿಸಿ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿ ಶೇಖರಿಸಲಾಗಿದ್ದ ರಾಸಾಯನಿಕಗಳ ಸೋರಿಕೆಯಿಂದಾಗಿ ದೊಡ್ಡ ಟ್ಯಾಂಕ್‍ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಸೂರತ್ ಉಸ್ತುವಾರಿ ಮುಖ್ಯ ಅಗ್ನಿಶಾಮಕ ಅಕಾರಿ ಬಸಂತ್ ಪರೀಕ್ ಹೇಳಿದ್ದಾರೆ.

ಘಟನೆಯಲ್ಲಿ ಕನಿಷ್ಠ 24 ಕಾರ್ಮಿಕರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.ಘಟನೆ ನಡೆದಾಗ ಕಾರ್ಖಾನೆಯೊಳಗೆ ಎಷ್ಟು ಕಾರ್ಮಿಕರು ಇದ್ದರು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಚೀನಾದಲ್ಲಿ ಹೊಸ ಮಾದರಿ ಸೋಂಕು, ಕರ್ನಾಟಕ ಸೇರಿ 5 ರಾಜ್ಯಗಳಿಗೆ ಕೇಂದ್ರ ಕಟ್ಟುನಿಟ್ಟಿನ ಸೂಚನೆ

ಸೋಟದಿಂದಾಗಿ ಕಾರ್ಖಾನೆಯ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಮತ್ತು ಬೆಂಕಿ ಇಡೀ ಘಟಕಕ್ಕೆ ಆವರಿಸಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

RELATED ARTICLES

Latest News