Thursday, November 21, 2024
Homeಬೆಂಗಳೂರುಲಾಭದಾಸೆಗೆ ಕಂಡಕಂಡಲ್ಲಿ ಹಣ ಹೂಡಿಕೆ ಮಾಡೋ ಮುನ್ನ ಹುಷಾರ್..!

ಲಾಭದಾಸೆಗೆ ಕಂಡಕಂಡಲ್ಲಿ ಹಣ ಹೂಡಿಕೆ ಮಾಡೋ ಮುನ್ನ ಹುಷಾರ್..!

ಬೆಂಗಳೂರು,ಡಿ.19-ಅಧಿಕ ಲಾಭಾಂಶದ ಆಮಿಷವೊಡ್ಡಿ ಸಾರ್ವಜನಿಕರಿಂದ 25 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ 7 ಲಕ್ಷ ಹಣ, ದಾಖಲಾತಿಗಳು ಹಾಗೂ ಕಂಪ್ಯೂಟರ್ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವಂಚಕರು ಪ್ರಮ್ಯ ಇಂಟರ್ ನ್ಯಾಷನಲ್ ಎಂಬ ಕಂಪನಿಯನ್ನು ತೆರೆದು ಸಾರ್ವಜನಿಕರಿಗೆ ಅಧಿಕ ಲಾಭಾಂಶದ ಆಮಿಷವೊಡ್ಡಿ ಕೋಟ್ಯಂತರ ರೂ. ಹಣವನ್ನು ಹೂಡಿಕೆ ಮಾಡಿಸಿಕೊಂಡಿದ್ದಾರೆ.

ಇದರಿಂದ ಅಕ್ರಮವಾಗಿ ವೈಯಕ್ತಿಕ ಲಾಭ ಮಾಡಿಕೊಂಡು ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದಾರೆಂಬ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು ಆ ಕಂಪನಿ ಮೇಲೆ ದಾಳಿ ನಡೆಸಿ ಅಕ್ರಮ ವ್ಯವಹಾರದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿ ಏಳು ಲಕ್ಷ ಹಣ, ವಿವಿಧ ದಾಖಲಾತಿಗಳು ಹಾಗೂ ಕಂಪ್ಯೂಟರ್ ಉಪಕರಣಗಳನ್ನು ವಶಪಡಿಸಿ ಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಆರೋಪಿಗಳು 700ಕ್ಕೂ ಹೆಚ್ಚು ಜನರಿಂದ 25 ಕೋಟಿಗೂ ಅಕ ಹಣವನ್ನು ಹೂಡಿಕೆ ಮಾಡಿಸಿಕೊಂಡು ಆ ಹಣದಿಂದ ಕೋಟ್ಯಂತರ ರೂ. ಮೌಲ್ಯದ ಚರ ಹಾಗೂ ಸ್ಥಿರಾಸ್ತಿಗಳನ್ನು ಖರೀದಿ ಮಾಡಿ ವೈಯಕ್ತಿಕ ಲಾಭ ಮಾಡಿಕೊಂಡಿರುತ್ತಾರೆ ಎಂಬುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿರುತ್ತದೆ.

ಸಿಸಿಬಿಯ ಆರ್ಥಿಕ ಅಪರಾಧ ದಳದ ಅಧಿಕಾರಿ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿರುತ್ತಾರೆ. ಆರೋಪಿಗಳ ವಿರುದ್ಧ ಕೋಣಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

RELATED ARTICLES

Latest News