25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ

Social Share

ನವದೆಹಲಿ,ಫೆ.1-ದೇಶದಲ್ಲಿ ಸಂಪರ್ಕ ಕ್ರಾಂತಿಯನ್ನು ಸೃಷ್ಟಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಪ್ರಸಕ್ತ ವರ್ಷದಲ್ಲಿ 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದೆ.
ಸಂಸತ್‍ನಲ್ಲಿಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮಂಡಿಸಿದ 2022-23ನೇ ಸಾಲಿನ ಬಜೆಟ್‍ನಲ್ಲಿ, ಪ್ರಸಕ್ತ ವರ್ಷ 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ವಿಸ್ತರಣೆ ಮಾಡುವುದಾಗಿ ಘೊಷಣೆ ಮಾಡಿದರು.
ಇದಕ್ಕಾಗಿ ಅಗತ್ಯವಾದ ಅನುದಾನವನ್ನು ಸಾರಿಗೆ ಇಲಾಖೆಗೆ ಒದಗಿಸುವುದಾಗಿಯೂ ಪ್ರಕಟಿಸಿದರು. ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದಿಂದ ಸಂಪರ್ಕ ಕ್ರಾಂತಿಯಾಗಲಿದ್ದು ಇದರಿಂದ ಕೈಗಾರಿಕೆಗಳ ಸ್ಥಾಪನೆ ಹಾಗೂ ಆರ್ಥಿಕ ಬೆಳವಣಿಗೆಗೆ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

Articles You Might Like

Share This Article