Tuesday, April 1, 2025
HomeಬೆಂಗಳೂರುBBMP Budget : ಹೃದಯಸ್ತಂಭನ ತುರ್ತು ಆರೈಕೆಗಾಗಿ 26 ಬಿಎಲ್ಎಸ್ ಆ್ಯಂಬುಲೆನ್ಸ್ ಸೇವೆ

BBMP Budget : ಹೃದಯಸ್ತಂಭನ ತುರ್ತು ಆರೈಕೆಗಾಗಿ 26 ಬಿಎಲ್ಎಸ್ ಆ್ಯಂಬುಲೆನ್ಸ್ ಸೇವೆ

26 BLS ambulance services for emergency care

ಬೆಂಗಳೂರು,ಮಾ.29- ಬ್ರಾಂಡ್ ಬೆಂಗಳೂರು, ಆರೋಗ್ಯಕರ ಬೆಂಗಳೂರು ಎಲ್ಲರಿಗೂ ಆರೋಗ್ಯ ಅಭಿಯಾನದಡಿ ಬಿಬಿಎಂಪಿ ಆರೋಗ್ಯ ಸೇವೆಗೆ ವಿಶೇಷ ಒತ್ತು ನೀಡಿದ್ದು, ಹೆಚ್ಚುತ್ತಿರುವ ಹೃದಯಸ್ತಂಭನ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ತುರ್ತು ಆರೈಕೆಗಾಗಿ 26 ಬಿಎಲ್ ಎಸ್ ಆ್ಯಂಬುಲೆನ್ಸ್ ಸೇವೆಯನ್ನು ಒದಗಿಸಲಿದೆ.

ಪ್ರಸಕ್ತ ಸಾಲಿನ ಬಿಬಿಎಂಪಿ ಬಜೆಟ್ ಅನ್ನು ಮಂಡಿಸಿದ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ.ಹರೀಶ್‌ ಕುಮಾರ್ ಆರೋಗ್ಯಕ್ಕೆ ವಿಶೇಷ ಒತ್ತು ನೀಡಿದ್ದಾರೆ. ಈಗಾಗಲೇ ನಗರದಲ್ಲಿ ವಿಶೇಷ ಚೇತನ ಮಕ್ಕಳಿಗೆ ಪಿಜಿಯೋಥೆರಪಿ ಸೇವೆಯನ್ನು ಒದಗಿಸುತ್ತಿದ್ದು, ಹೆಚ್ಚುವರಿ 7 ಪಿಜಿಯೋಥೆರಪಿ ಸೇವೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದರು.

ಗರ್ಭಿಣಿಯರ ಮತ್ತು ನವಜಾತ ಶಿಶುಗಳ ಸಮಗ್ರ ಸಮರ್ಪಕ ನಿರಂತರ ಆರೈಕೆಗಾಗಿ ನೂತನವಾದ ಎಐ ತಂತ್ರ ಜ್ಞಾನದೊಂದಿಗೆ ಸೇವ್ ಮಾಮ್ ಎಂಬ ತಾಯಿ-ಮಕ್ಕಳ ಆರೈಕೆ ವೇದಿಕೆಯನ್ನು ಪ್ರಾರಂಭಿಸಲಿದೆ. ವೈಯಕ್ತಿಕ ಹಾಗೂ ನಿರಂತರ ಆರೈಕೆಯನ್ನು ಖಚಿತಪಡಿಸಿಕೊಳ್ಳಲು ನಗರಾದ್ಯಂತ ಪ್ರಾಯೋಗಿಕವಾಗಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಾಯಿ ಮತ್ತು ಮಕ್ಕಳ ಆರೈಕೆ ವೇದಿಕೆಯನ್ನು ಸ್ಥಾಪಿಸಲಾಗಿದೆ.

ಪಾಲಿಕೆಯ 300 ಹಾಸಿಗೆಯುಳ್ಳ ಎಂ.ಸಿ.ಲೇಔಟ್‌ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ ನೀಡಲಾಗುತ್ತಿದ್ದು, ಇಲ್ಲಿ ಹೊಸದಾಗಿ ವೈದ್ಯಕೀಯ ಮಹಾವಿದ್ಯಾಲಯದ ಸ್ಥಾಪನೆಗೆ ಅಂದಾಜು 633 ಕೋಟಿ ರೂ. ಅಗತ್ಯವಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಕೈಗೊಳ್ಳಲು ಎ,ಬಿ,ಸಿ ಕಾರ್ಯಕ್ರಮದಡಿ ಪಾಲಿಕೆ ವ್ಯಾಪ್ತಿಯಲ್ಲಿ 1,80,000 ಕ್ಕೂ ಹೆಚ್ಚು ಲಸಿಕೆಗಳನ್ನು ನೀಡಲಾಗುವುದು. ಪಾಲಿಕೆಯ 6 ವಲಯಗಳಲ್ಲಿ ಪಶು ವೈದ್ಯಕೀಯ ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು.ಬೊಮ್ಮನಹಳ್ಳಿ ಮತ್ತು ಮಹದೇವಪುರ ವಲಯಗಳಲ್ಲಿ ಅಂದಾಜು 7.5 ಕೋಟಿ ರೂ. ವೆಚ್ಚದಲ್ಲಿ ಹೊಸ ಎ, ಬಿ, ಸಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಸಿಕೊಳ್ಳುವ ಮೂಲಕ ಬೀದಿನಾಯಿಗಳಿಗೆ ಆಹಾರ ನೀಡಲು ಕ್ರಮ ವಹಿಸಲಾಗುವುದು. ಇವುಗಳ ನಿರ್ವಹಣೆಗಾಗಿ 660 ಕೋಟಿ ರೂ. ಮೀಸಲಿರಿಸಲಾಗಿದೆ. ನವೀಕೃತ ತಂತ್ರಜ್ಞಾನ ಬಳಸಿ ಕಸಾಯಿಖಾನೆಗಳನ್ನು 5 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಿಸಲು ಕ್ರಮ ವಹಿಸಲಾಗುವುದು.

ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಕಸಾಯಿಖಾನೆ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಮತ್ತು ನಿರ್ವಹಣೆಗೆ 2 ಕೋಟಿ ರೂ. ಅನುದಾನ ಮೀಸಲಿರಿಸಿದೆ. ರಾಯಪುರಂ ಹೆರಿಗೆ ಆಸ್ಪತ್ರೆ, ಸಗಯಪುರ ಮತ್ತು ಕುಶಾಲನಗರ ಆಸ್ಪತ್ರೆ ಮತ್ತು ಸಿಂಗಾಪುರ ಗ್ರಾಮದ 50 ಹಾಸಿಗೆ ಆಸ್ಪತ್ರೆಗಳ ಹೆಚ್ಚುವರಿ ಕಾಮಗಾರಿಗಳನ್ನು ಈ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗಿದೆ.

ಕುಂಬಳಗೋಡು ಮತ್ತು ತಾವರಕೆರೆಯಲ್ಲಿ ಚಿತಾಗಾರಗಳನ್ನು ನಿರ್ಮಿಸಲಾಗುವುದು ಎಂದರು.ಮುಂದಿನ 2 ವರ್ಷಗಳಲ್ಲಿ 413 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ಬೆಂಗಳೂರು ಯೋಜನೆಯನ್ನು ಅನುಷ್ಟಾನಗೊಳಿಸಲು ಸರ್ಕಾರ ಅನುಮೋದನೆ ನೀಡಿದ್ದು, ವಿಸ್ತ್ರತ ಯೋಜನಾ ತಯಾರಿಕೆಗೆ ಟೆಂಡ‌ರ್ ಆಹ್ವಾನಿಸಲಾಗಿದ್ದು, ಈ ಯೋಜನೆಯಡಿ 19 ಆಸ್ಪತ್ರೆಗಳ ಒಟ್ಟಾರೆ 852 ಹಾಸಿಗೆಗಳನ್ನು 1122 ಹಾಸಿಗೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.

ರೋಗ ಪತ್ತೆ ಹಚ್ಚುವ ಸೌಲಭ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ 60 ಕ್ಕೂ ಹೆಚ್ಚು ಪರೀಕ್ಷೆಗಳನ್ನು ಉಚಿತವಾಗಿ ನಡೆಸಲು 26 ಹೊಸ ಕೇಂದ್ರಗಳಲ್ಲಿ ದಂತ ಚಿಕಿತ್ಸಾ ಸೇವೆಗಳನ್ನು ಒದಗಿಸಲಾಗುವುದು ಎಂದರು.

RELATED ARTICLES

Latest News