Thursday, September 18, 2025
Homeರಾಷ್ಟ್ರೀಯ | Nationalಇನ್ನು ಜೀವಂತವಾಗಿದೆ ಬಾಲ್ಯ ವಿವಾಹ

ಇನ್ನು ಜೀವಂತವಾಗಿದೆ ಬಾಲ್ಯ ವಿವಾಹ

ಥಾಣೆ, ಜ. 5 (ಪಿಟಿಐ) ಹನ್ನೇರಡು ವರ್ಷದ ಬಾಲಕಿಯನ್ನು ಮದುವೆಯಾಗಿ, ಪದೇ ಪದೇ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ 29 ವರ್ಷದ ಯುವಕನ ವಿರುದ್ಧ ನವಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೇಶದಲ್ಲಿ ಕಾನೂನು ಬಾಹಿರವಾದ ಈ ಬಾಲ್ಯವಿವಾಹ ಸುಮಾರು ಆರು ತಿಂಗಳ ಹಿಂದೆ ನಡೆದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ ವ್ಯಕ್ತಿ ಪದೇ ಪದೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭವತಿಯನ್ನಾಗಿಸಿದ್ದಾನೆ. ಪುರುಷ ಮತ್ತು ಅಪ್ರಾಪ್ತ ಇಬ್ಬರೂ ಮೂಲತಃ ಮಹಾರಾಷ್ಟ್ರದ ಸತಾರಾ ಜಿಲ್ಲೆಯವರು ಎಂದು ಅವರು ತಿಳಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್​​ಗೆ ರಾಮ ಮಂದಿರ ಉದ್ಘಾಟನೆ ಆಮಂತ್ರಣ

ನಿನ್ನೆ ನಡೆಸಿದ ಸಮೀಕ್ಷೆಯಲ್ಲಿ, ಪನ್ವೇಲ್‍ನ ಸ್ಥಳೀಯ ವೈದ್ಯರಿಗೆ ಬಾಲಕಿ ನಾಲ್ಕು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಖಂಡೇಶ್ವರ ಪೊಲೀಸ್ ಠಾಣೆಯ ಠಾಣಾಕಾರಿ ತಿಳಿಸಿದ್ದಾರೆ.

RELATED ARTICLES

Latest News