Thursday, November 21, 2024
Homeರಾಜ್ಯದಸರಾ ಸಂಭ್ರಮದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಾರಾಣಿ , ಅರಮನೆಯಲ್ಲಿ ಸಂತಸ ಇಮ್ಮಡಿ

ದಸರಾ ಸಂಭ್ರಮದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಾರಾಣಿ , ಅರಮನೆಯಲ್ಲಿ ಸಂತಸ ಇಮ್ಮಡಿ

2nd Baby Boy For Mysuru Royal Family

ಮೈಸೂರು,ಅ11-ಯದುವಂಶದ ಮಹಾರಾಣಿ ತ್ರಿಷಿಕಾ ಇಂದು ಬೆಳಿಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ನಾಡ ಹಬ್ಬ ದಸರಾ ಸಂದರ್ಭದಲ್ಲೇ ಯದುವಂಶಕ್ಕೆ ಹೊಸ ಸದಸ್ಯ ಸೇರ್ಪಡೆಯಿಂದ ಸಂಭ್ರಮ ಇಮ್ಮಡಿಯಾಗಿದೆ.ಮೈಸೂರಿನ ಯಾದವಗಿರಿಯಲ್ಲಿರುವ ಮದರ್ ಹುಡ್ ಆಸ್ಪತ್ರೆಯಲ್ಲಿ ತ್ರಿಷಿಕಾದೇವಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ

ಯುವರಾಜ ಆದ್ಯವೀರ್‌ಗೆ ಸಹೋದರ ಸಿಕ್ಕಿದ್ದು ಒಂದೆಡೆ ಅರಮನೆಯಲ್ಲಿ ಸಂಭ್ರಮದ ವಾತಾವರಣ ಇದೆ. ಮತ್ತೊಂದೆಡೆ ಸೂತಕದ ಹಿನ್ನಲೆ ಪೂಜಾ ಕೈಂಕರ್ಯಗಳಿಗೆ ಅಡ್ಡಿಯಾಗಲಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ.

ಈಗಾಗಲೇ ಯದುವೀರ್ ರವರು ಕಂಕಣ ತೊಟ್ಟಿದ್ದಾರೆ. ಮಗು ಹುಟ್ಟಿದಾಗ ಸಂಪ್ರದಾಯವಾಗಿ ಸೂತಕ ಆಚರಿಸುವ ವಾಡಿಕೆ ಇದೆ. ಈಗ ಅರಮನೆಯಲ್ಲಿ ಹೇಗೆ ಪೂಜಾ ಕೈಂಕರ್ಯಗಳು ನಡೆಯುತ್ತದೆ ಎಂಬ ಅಂಶ ಕುತೂಹಲಕ್ಕೆ ಕಾರಣವಾಗಿದೆ.

ಈ ಕುರಿತಂತೆ ಮುಂದಿನ ಪೂಜಾ ವಿಧಿ ವಿಧಾನಗಳನ್ನ ಮುಂದುವರೆಸುವ ಬಗ್ಗೆ ಅರಮನೆ ಪುರೋಹಿತರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಅರಮನೆ ಮೂಲಗಳಿಂದ ತಿಳಿದು ಬಂದಿದೆ.

RELATED ARTICLES

Latest News