Sunday, July 21, 2024
Homeರಾಜ್ಯರಾಜ್ಯದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣ ಪ್ರಕ್ರಿಯೆಗೆ ಚಾಲನೆ

ರಾಜ್ಯದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು,ಜು.7- ತಮಿಳುನಾಡಿಗೆ ಸಡ್ಡು ಹೊಡೆದು ರಾಜ್ಯದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ರಾಜ್ಯಸರ್ಕಾರ ಮುಂದಾಗಿದ್ದು, ಈಗಾಗಲೇ ಸ್ಥಳ ಆಯ್ಕೆಯೂ ಸೇರಿದಂತೆ ಹಲವು ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆ. ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ತಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗಿನ ಒಪ್ಪಂದದ ಪ್ರಕಾರ, 2032 ರವರೆಗೂ ಮತ್ತೊಂದು ವಿಮಾನನಿಲ್ದಾಣ ನಿರ್ಮಿಸಲು ಅವಕಾಶ ಇಲ್ಲ. 2033 ರ ನಂತರ ವಿಮಾನನಿಲ್ದಾಣ ಸ್ಥಾಪನೆಗೆ ಯಾವುದೇ ಅಡ್ಡಿ ಇಲ್ಲ ಎಂದರು.

ಆದರೂ ರಾಜ್ಯಸರ್ಕಾರಕ್ಕೆ ವಿಶೇಷ ರಿಯಾಯಿತಿಗಳಿವೆ. ಎಕ್‌್ಸಕ್ಯೂಸ್ಲೀವ್‌ ಕ್ಲಾಸ್‌‍ ನಿಯಮಾವಳಿಗಳ ಅನುಸಾರವೇ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಸ್ಥಾಪನೆಗೆ ನಿರ್ಧರಿಸಲಾಗಿದೆ.ಕೆಲದಿನಗಳ ಹಿಂದೆ ಮೂಲಭೂತ ಸೌಕರ್ಯ ಇಲಾಖೆಯ ಸಭೆ ನಡೆಸಲಾಗಿದ್ದು, 2033 ರವರೆಗೂ ಕಾಯುವ ಅಗತ್ಯವಿಲ್ಲ. ಇದರ ನಡುವೆ ಭೂಸ್ವಾಧೀನ, ಸ್ಥಳ ಆಯ್ಕೆ ಸೇರಿದಂತೆ ಇತರ ಮಾನದಂಡಗಳ ಪರಿಶೀಲನೆ ಆರಂಭವಾಗಿದೆ ಎಂದರು.

2ನೇ ವಿಮಾನನಿಲ್ದಾಣದ ನಿರ್ಮಾಣಕ್ಕೆ ಈಗಾಗಲೇ ಅಸ್ತಿತ್ವದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಸಂಪರ್ಕವನ್ನು ಪ್ರಮುಖವಾಗಿ ಗಮನದಲ್ಲಿಟ್ಟುಕೊಳ್ಳಬೇಕೇ? ಅಥವಾ ಪ್ರಯಾಣಿಕರ ದಟ್ಟಣೆಯನ್ನು ಪರಿಗಣಿಸಬೇಕೇ? ಎಂಬ ಗೊಂದಲಗಳಿವೆ.

ಈ ಗೊಂದಲವನ್ನು ಮೊದಲು ಪರಿಹರಿಸಿಕೊಳ್ಳಬೇಕಿದೆ. ಇದಕ್ಕಾಗಿ ಚರ್ಚೆಗಳು ನಡೆಯುತ್ತಿವೆ. ಅಧಿಕಾರಿಗಳಿಗೂ ವರದಿ ನೀಡಲು ಸೂಚಿಸಲಾಗಿದೆ. ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ನ್ಯೂಯಾರ್ಕ್‌, ಲಂಡನ್‌ನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಹತ್ತಿರದಲ್ಲೇ ಇವೆ.

ನಮ ದೇಶದ ಮುಂಬೈನ ಹೊಸ ವಿಮಾನನಿಲ್ದಾಣ, ಹಳೆ ವಿಮಾನ ನಿಲ್ದಾಣಗಳು 35 ಕಿ.ಮೀ.ಅಂತರದಲ್ಲಿವೆ. ಹಾಲಿ ಇರುವ ವಿಮಾನನಿಲ್ದಾಣಕ್ಕೆ ಸಂಪರ್ಕಿಸುವಂತೆ 2ನೇ ವಿಮಾನನಿಲ್ದಾಣ ನಿರ್ಮಿಸುವುದಾದರೆ ಅದಕ್ಕೆ ದೊಡ್ಡಬಳ್ಳಾಪುರ, ದಾಬಸ್‌‍ಪೇಟೆ, ತುಮಕೂರಿನಂತಹ ಸ್ಥಳಗಳನ್ನು ಗುರುತಿಸಲಾಗಿದ್ದು, ಬೆಂಗಳೂರಿನ ಉತ್ತರಭಾಗದ ಕಡೆ ಗಮನ ಹರಿಸಬೇಕಾಗುತ್ತದೆ.

ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದನ್ನು ಪರಿಗಣಿಸುವುದಾದರೆ ಬೆಂಗಳೂರು ದಕ್ಷಿಣದಲ್ಲಿ ವಿಮಾನನಿಲ್ದಾಣ ನಿರ್ಮಿಸಬೇಕು. ಇದಕ್ಕಾಗಿ ವೈಟ್‌ಫೀಲ್‌್ಡ ಅಥವಾ ಕನಕಪುರ ಭಾಗಗಳನ್ನು ಪರಿಶೀಲಿಸಲಾಗುತ್ತಿದೆ.

ಐದಾರು ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದೆ. ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಎರಡನೇ ಸಭೆ ನಡೆಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಬಳಿಕ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಪ್ರಕ್ರಿಯೆಗಳನ್ನು ಆರಂಭಿಸಲಾಗುವುದು ಎಂದರು.
ನಾವು ಸಭೆ ನಡೆಸಿದ ಮೇಲೆ ತಮಿಳುನಾಡು ಸರ್ಕಾರವೂ ಕೂಡ ಹೊಸೂರಿನಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಹೇಳಿದೆ. ಅವರಿಗೆ ಯಾವ ಮಾನದಂಡಗಳು ಅವಕಾಶ ಕಲ್ಪಿಸುತ್ತವೆ ಎಂಬುದನ್ನು ನೋಡಬೇಕಿದೆ ಎಂದರು.

ಇನ್ನು ರಾಜಕೀಯ ವಿಚಾರಗಳಿಗೆ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ್‌ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಹೈಕಮಾಂಡ್‌ ಸೂಕ್ತ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ. ಯಾರು, ಯಾವುದೇ ಚರ್ಚೆ ಮಾಡಿದರೂ ಅದು ಪ್ರಯೋಜನವಾಗುವುದಿಲ್ಲ ಎಂದು ಹೇಳಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆಗೆ ಸಂಬಂಧಪಟ್ಟ ಪ್ರಕರಣದಲ್ಲಿ ಬಿಜೆಪಿಯವರು ಸಿಬಿಐ ತನಿಖೆಗೆ ಕೇಳುತ್ತಿರುವುದು ಹಾಸ್ಯಾಸ್ಪದ. ಈ ಮೊದಲು ಸಿಬಿಐ ಅನ್ನು ಕಾಂಗ್ರೆಸ್‌‍ ಇನ್ವೆಸ್ಟಿಗೇಷನ್‌ ಬ್ಯೂರೋ ಎನ್ನುತ್ತಿದ್ದರು. ಕಳೆದ 2 ಅವಧಿಯಲ್ಲಿ ಸಿಬಿಐ ಅನ್ನು ವಿರೋಧಪಕ್ಷಗಳ ವಿರುದ್ಧ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಲಾಗಿದೆ.

ಪ್ರತಿಪಕ್ಷಗಳ ನಾಯಕರ ವಿರುದ್ಧ ಸಿಬಿಐ, ಇಡಿ ದಾಳಿ ನಡೆಸಿ ರಾಜಕೀಯವಾಗಿ ಅಸ್ತಿತ್ವ ಯತ್ನ ನಡೆಸಿದೆ. ಈಗ ಅದು ಬಿಜೆಪಿ ಬ್ಯೂರೊ ಆಫ್‌ ಇನ್ವೆಸ್ಟಿಗೇಷನ್‌ ಆಗಿದೆ. ಎಲೆಕ್ಟೊರಲ್‌ ಬಾಂಡ್‌ ಹಗರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳ ದಾಳಿ ನಡೆಸಿರುವುದು ಕಂಡುಬಂದಿದೆ.

ಹೀಗಾಗಿ ಬಿಜೆಪಿಯವರು ಸಿಬಿಐ ತನಿಖೆ ಕೇಳುವ ನೈತಿಕತೆಯನ್ನು ಉಳಿಸಿಕೊಂಡಿಲ್ಲ. ಈ ಹಿಂದೆ ನಮ ಸರ್ಕಾರ ಇದ್ದಾಗ ಏಳೆಂಟು ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆವು. ಬಿಜೆಪಿಯವರು ಒಂದು ಪ್ರಕರಣವನ್ನು ಸಿಬಿಐಗೆ ಒಪ್ಪಿಸಿರಲಿಲ್ಲ ಎಂದು ಹೇಳಿದರು.
ಕೆಐಎಡಿಬಿ ನಿವೇಶನ ಹಂಚಿಕೆಯಲ್ಲೂ ಅವ್ಯವಹಾರಗಳಾಗಿವೆ ಎಂಬುದು ಆಧಾರರಹಿತವಾದ ಆರೋಪ. ನಾವು ಪಾರದರ್ಶಕವಾದ ಪದ್ಧತಿಯನ್ನು ಅನುಸರಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಯವರಿಗೆ ದೂರು ನೀಡಿರುವುದು ತಮ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಆ ದೂರು ಕುರಿತು ಮುಖ್ಯಮಂತ್ರಿಯವರು ತಮ ಬಳಿ ವಿವರಣೆ ಕೇಳಿದರೆ ಉತ್ತರ ನೀಡುವುದಾಗಿ ತಿಳಿಸಿದರು.

RELATED ARTICLES

Latest News