Sunday, May 19, 2024
Homeರಾಜ್ಯರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ : ಘಟಾನುಘಟಿಗಳು ಸೇರಿ 227 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ : ಘಟಾನುಘಟಿಗಳು ಸೇರಿ 227 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು,ಮೇ 6- ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್‌ ಶೆಟ್ಟರ್‌, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ 227 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಳೆ ಮತದಾನ ನಡೆಯಲಿದೆ.

ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಭಾರತದ ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.ಚುನಾವಣಾ ಹಾಗೂ ಭದ್ರತಾ ಸಿಬ್ಬಂದಿ ಆಯಾ ಕ್ಷೇತ್ರದ ಮಸ್ಟರಿಂಗ್‌ ಕೇಂದ್ರಗಳಲ್ಲಿ ಸಮಾವೇಶಗೊಂಡು ನಿಗದಿಪಡಿಸಿದ ಮತಗಟ್ಟೆಗಳಿಗೆ ಮತಯಂತ್ರ, ಚುನಾವಣಾ ಸಾಮಗ್ರಿ ಹಾಗೂ ಭದ್ರತಾ ಸಿಬ್ಬಂದಿಯೊಂದಿಗೆ ಮಧ್ಯಾಹ್ನದ ನಂತರ ತೆರಳಿದರು.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, ಕಾಂಗ್ರೆಸ್‌, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿದಂತೆ ಮತ್ತು 327 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.
ಉತ್ತರ ಕರ್ನಾಟಕದ ಒಟ್ಟು 14 ಕ್ಷೇತ್ರಗಳಲ್ಲಿ 2,59,52,958 ಮತದಾರರಿದ್ದು, 1,29,48,978 ಪುರುಷ, 1,29,64,570 ಮಹಿಳಾ ಹಾಗೂ 1,945 ತೃತೀಯ ಲಿಂಗಿ ಮತದಾರರು ಇದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ 16,41,156 ಮತದಾರರಿದ್ದರೆ, ಅತೀ ಹೆಚ್ಚು ಗುಲ್ಬರ್ಗ ಲೋಕಸಭಾ ಕ್ಷೇತ್ರದಲ್ಲಿ 20,98,202 ಮತದಾರರಿದ್ದಾರೆ. 28,269 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.ಸೂಕ್ಷ್ಮ ಮತಗಟ್ಟೆಗಳಿಗೆ ಒಬ್ಬರು ಹೆಡ್‌ಕಾನ್ಸ್ ಟೇಬಲ್‌ ಹಾಗೂ ಒಬ್ಬರು ಕಾನ್‌್ಸಟೇಬಲ್‌ ಅನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಸಾಮಾನ್ಯ ಮತಗಟ್ಟೆಗೆ ಒಬ್ಬರು ಕಾನ್ಸ್ ಟೇಬಲ್‌ ಅನ್ನು ನಿಯೋಜಿಸಲಾಗಿದ್ದು, ಮತಗಟ್ಟೆಗಳ ಸಮೂಹ ಇರುವ ಕಡೆ ಕೇಂದ್ರದ ಪಡೆಯನ್ನು ನಿಯೋಜಿಸಲಾಗಿದೆ.

ಸುರಪುರ ಉಪಚುನಾವಣೆ ಹಾಗೂ ಲೋಕಸಭಾ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲೂ ಎಡಗೈ ತೋರುಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗುತ್ತದೆ.

ಪರ್ಯಾಯ ಗುರುತಿನ ಚೀಟಿ :
ಚುನಾವಣಾ ಆಯೋಗದಿಂದ ಈಗಾಗಲೇ ನೀಡಲಾಗಿರುವ ವೋಟರ್‌ರ‍ಸ ಸ್ಲಿಪ್‌ನ ಜೊತೆಗೆ ಮತದಾರರ ಗುರುತಿನ ಚೀಟಿ, ಆಧಾರ್‌ಕಾರ್ಡ್‌, ನರೇಗ ಜಾಬ್‌ಕಾರ್ಡ್‌, ಬ್ಯಾಂಕ್‌, ಪೋಸ್‌್ಟ ಆಫೀಸ್‌ ಪಾಸ್‌ಬುಕ್‌, ಕಾರ್ಮಿಕ ಸಚಿವರು ನೀಡುವ ಆರೋಗ್ಯ ವಿಮಾ ಸ್ಮಾರ್ಟ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್‌್ಸ, ಪ್ಯಾನ್‌ ಕಾರ್ಡ್‌, ಪಾಸ್‌ಪೋರ್ಟ್‌, ಪಿಂಚಣಿಯ ದಾಖಲೆ, ರಾಜ್ಯಸರ್ಕಾರ, ಸಾರ್ವಜನಿಕ ಸಂಸ್ಥೆಗಳು, ಪಬ್ಲಿಕ್‌ ಲಿಮಿಟೆಡ್‌ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿ, ಎಂಎಲ್‌ಎ, ಎಂಎಲ್‌ಸಿಗಳಿಗೆ ನೀಡಿರುವ ಅಧಿ ಕೃತ ಗುರುತಿನ ಚೀಟಿ, ಸಾಮಾಜಿಕ ನ್ಯಾಯ ಸಬಲೀಕರಣ ನೀಡಿರುವ ವಿಶಿಷ್ಟ ಅಂಗವಿಕಲ ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಬಹುದಾಗಿದೆ.

ಮತದಾನ ಸಾರ್ವತ್ರಿಕ ರಜೆ :
ಮತದಾನ ನಡೆಯುವ ಎಲ್ಲಾ ಕ್ಷೇತ್ರಗಳಲ್ಲಿ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಕೈಗಾರಿಕೋದ್ಯಮಗಳು, ವಿವಿಧ ಖಾಸಗಿ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದ್ದು, ದಿನಗೂಲಿ ವೇತನದಲ್ಲಿ ಕೆಲಸ ಮಾಡುವವರಿಗೂ ಮತ ಚಲಾಯಿಸಲು ಅನುಕೂಲವಾಗುವಂತೆ ಸರ್ಕಾರ ವೇತನ ಸಹಿತ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ.

ನೆರಳಿನ ವ್ಯವಸ್ಥೆ :
ಬೇಸಿಗೆಯ ಬಿಸಿಲು ತೀವ್ರವಾಗಿ ಹೆಚ್ಚಾಗಿದ್ದು, ಜನರು ತತ್ತರಿಸುವಂತಾಗಿರುವುದರಿಂದ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳಾದ ರ್ಯಾಂಪ್‌, ಕುಡಿಯುವ ನೀರು, ವಿದ್ಯುತ್‌, ಪೀಠೋಪಕರಣ, ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ, ಮತದಾರರಿಗೆ ಸಹಾಯವಾಗುವ ಸಂಕೇತ ಫಲಕಗಳನ್ನು ಅಳವಡಿಸಲಾಗಿದೆ.

ಮತಗಟ್ಟೆಯ ಅಕ್ಕಪಕ್ಕದ ಕೊಠಡಿಗಳನ್ನು ವಿಶ್ರಾಂತಿ ಕೊಠಡಿಗಳನ್ನಾಗಿ ಮಾರ್ಪಡಿಸಿ ಸಿದ್ಧವಿರಿಸಲಾಗಿದೆ. ತೀವ್ರ ಬಿಸಿಲು ಇರುವ ಹಿನ್ನೆಲೆಯಲ್ಲಿ ಮತಗಟ್ಟೆ ಆವರಣದಲ್ಲಿ ಶಾಮಿಯಾನ, ಫ್ಯಾನ್‌ ಮತ್ತು ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ಶುಷ್ರೂಕರು, ಆಶಾ ಕಾರ್ಯಕರ್ತೆಯರೊಂದಿಗೆ ಓಆರ್‌ಎಸ್‌ ಸೇರಿದಂತೆ ಇತರೆ ವೈದ್ಯಕೀಯ ಕಿಟ್‌ಗಳ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಆಂಬುಲೆನ್‌್ಸ ಒದಗಿಸಲು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾಯ್ದಿರಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಸಂಸ್ಕೃತಿಯ ಪ್ರತಿಬಿಂಬ :
560 ಮತಗಟ್ಟೆಗಳನ್ನು ಮಹಿಳೆಯರೇ ನಿರ್ವಹಿಸಲಿದ್ದು, 112 ಮತಗಟ್ಟೆಗಳನ್ನು ದಿವ್ಯಾಂಗರು ನಿರ್ವಹಿಸುತ್ತಾರೆ. ಇತರೆ ವಿವಿಧ ವಿಷಯಗಳ 224 ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಸ್ಥಳೀಯ ಸಂಸ್ಕೃತಿ ಸಂಪ್ರದಾಯವನ್ನು ಬಿಂಬಿಸುವಂತೆ ಅಲಂಕರಿಸಲಾಗಿದೆ.

RELATED ARTICLES

Latest News