Friday, November 22, 2024
Homeರಾಜ್ಯರಾಜ್ಯದಲ್ಲಿ 2ನೇ ಹಂತದ ಲೋಕಸಭೆ ಚುನಾವಣೆ : ನಾಮಪತ್ರ ವಾಪಸ್ ಪಡೆಯಲು ನಾಳೆ ಕಡೆಯ ದಿನ

ರಾಜ್ಯದಲ್ಲಿ 2ನೇ ಹಂತದ ಲೋಕಸಭೆ ಚುನಾವಣೆ : ನಾಮಪತ್ರ ವಾಪಸ್ ಪಡೆಯಲು ನಾಳೆ ಕಡೆಯ ದಿನ

ಬೆಂಗಳೂರು,ಏ.21- ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆಯ 14 ಲೋಕಸಭಾ ಕ್ಷೇತ್ರಗಳು ಹಾಗೂ ಸುರಪುರ ವಿಧಾನಸಭೆ ಉಪಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ವಾಪಸ್ ಪಡೆಯಲು ನಾಳೆ ಕಡೆಯ ದಿನವಾಗಿದೆ. ನಾಳೆ ಸಂಜೆ ವೇಳೆಗೆ ಆಯಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕಣದಲ್ಲಿ ಉಳಿಯುವ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಉತ್ತರಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ 272 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ನಿನ್ನೆ ನಡೆದ ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ 109 ನಾಮಪತ್ರಗಳು ತಿರಸ್ಕøತಗೊಂಡಿವೆ. ಒಟ್ಟು 394 ನಾಮಪತ್ರಗಳು ಪುರಸ್ಕøತವಾಗಿವೆ. ದಾವಣಗೆರೆಯಲ್ಲಿ ಅತೀ ಹೆಚ್ಚು 33 ಅಭ್ಯರ್ಥಿಗಳಿದ್ದರೆ, ರಾಯಚೂರಿನಲ್ಲಿ ಹೆಚ್ಚು ಕಡಿಮೆ 10 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.

ಸುರಪುರ ವಿಧಾನಸಭಾ ಉಪಚುನಾವಣೆಗೆ 7 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, 13 ನಾಮಪತ್ರಗಳು ತಿರಸ್ಕøತಗೊಂಡಿವೆ. ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 14 ಕ್ಷೇತ್ರಗಳಲ್ಲೂ ಹಾಗೂ ಸುರಪುರ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿವೆ.

ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮಾತ್ರ ಸ್ಪರ್ಧೆಯಿಂದ ದೂರ ಉಳಿದಿದೆ. ಮೇ 7 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆದು ಅಂದು ಫಲಿತಾಂಶ ಪ್ರಕಟವಾಗಲಿದೆ.

ಚಿಕ್ಕೋಡಿ 20, ಬೆಳಗಾವಿ 21, ಬಾಗಲಕೋಟೆ 26, ಬಿಜಾಪುರ 12, ಗುಲ್ಬರ್ಗ 18, ರಾಯಚೂರು 10, ಬೀದರ್ 20, ಕೊಪ್ಪಳ 23, ಬಳ್ಳಾರಿ 11, ಹಾವೇರಿ 14, ಧಾರವಾಡ 25, ಉತ್ತರಕನ್ನಡ 13, ದಾವಣಗೆರೆ 33, ಶಿವಮೊಗ್ಗ 26 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿ ಚುನಾವಣಾ ಕಣದಲ್ಲಿದ್ದಾರೆ.

RELATED ARTICLES

Latest News