ಕೈಮೂರ್, ಫೆ.11– ಬಿಹಾರದ ಕೈಮೂರ್ ಜಿಲ್ಲೆಯ ಮೊಹಾನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮುಥಾನಿ ಪ್ರದೇಶದ ಬಳಿ ಇಂದು ಮುಂಜಾನೆ ಟ್ರಕ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಮಹಾ ಕುಂಭದಿಂದ ಹಿಂತಿರುಗುತ್ತಿದ್ದ ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.
ಮತರನ್ನು ಅಂಜು ಸಿಂಗ್, ದೀಪಕ್ ಕುಮಾರ್ ಮತ್ತು ರಾಜಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಅಂಜಲಿ ಕುಮಾರಿ ಮತ್ತು ಕಾಂಚನ್ ಸಿಂಗ್ ಎಂದು ಗುರುತಿಸಲಾಗಿದೆ.
ಅಪಘಾತದ ಮಾಹಿತಿ ಪಡೆದ ಮೊಹಾನಿಯಾ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಸೂಕ್ತ ಚಿಕಿತ್ಸೆಗಾಗಿ ಉಪವಿಭಾಗೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಮತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ನ್ದೆಿಯ ಮಂಪರಿನಲ್ಲಿದ್ದ ಚಾಲಕ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಔರಂಗಾಬಾದ್‌ನಿಂದ ಬಂದವರು ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಮೊಹಾನಿ ಪೊಲೀಸ್ ಠಾಣೆಯ ಮುಖ್ಯಸ್ಥ ಪ್ರಿಯೇಶ್ ಪ್ರಿಯದರ್ಶಿ ತಿಳಿಸಿದ್ದಾರೆ.
ಮೊಹಾನಿಯಾದ ಉಪ ವಿಭಾಗ ಆಸ್ಪತ್ರೆಯ ವೈದ್ಯ ದಿನೇಶ್ ಚೌಹಾನ್, ಎಎನ್‌ಐ ಜೊತೆ ಮಾತನಾಡುತ್ತಾ, ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ಇಲ್ಲಿಗೆ ಕರೆತರಲಾಗಿದೆ. ಇತರ ಮೂವರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಹಿಂದೂಗಳಿಗೆ ಮಹತ್ವದ ಧಾರ್ಮಿಕ ಕಾರ್ಯಕ್ರಮವಾದ ಮಹಾ ಕುಂಭಮೇಳವು ಪವಿತ್ರ ನದಿಗಳಾದ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿಯ ಸಂಗಮದಲ್ಲಿ ನಡೆಯುತ್ತಿದೆ.