ಮೇಲ್ಛಾವಣಿ ಕುಸಿದು ಮಗು ಸೇರಿ ಮೂವರ ದುರ್ಮರಣ, ತಲಾ 4 ಲಕ್ಷ ಪರಿಹಾರ ಘೋಷಣೆ

Social Share

ಲಖ್ನೋ,ಸೆ.19- ಎರಡಂತಸ್ತಿನ ಕಟ್ಟಡದ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ನಡೆದಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿನಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಎರಡು ವರ್ಷದ ಹೆಣ್ಣು ಮಗು ಸೇರಿದಂತೆ ದಿಲೀಪ್(35) ಮತ್ತು ಚಾಂದಿನಿ(30) ದಂಪತಿ ಮೃತಪಟ್ಟಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣೆ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದ್ದ ಮೃತ ದೇಹಗಳನ್ನು ಹೊರತೆಗೆದಿದ್ದಾರೆ ಎಂದು ಎಸ್‍ಎಂಡಿ ಸೌರಬ್ ಸಿಂಗ್ ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅಕ್ಕಪಕ್ಕದ ಮನೆಗಳನ್ನು ತೆರವು ಮಾಡಿಸಲಾಗಿದ್ದು, ಮೇಲ್ಛಾವಣಿ ಹೇಗೆ ಕುಸಿದಿದೆ ಎಂಬುದು ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಕಲ್ಪ್ ಶರ್ಮಾ ತಿಳಿಸಿದ್ದಾರೆ.

ಘಟನೆ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಪರಿಹಾರ ಮೊತ್ತವನ್ನು ವಿಪತ್ತು ಪರಿಹಾರ ನಿಯಿಂದ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Articles You Might Like

Share This Article