ಎರಡುವರೆ ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶ

Social Share

ಐಜ್ವಾಲ್,ಜ.18- ನಿರ್ದಿಷ್ಟ ಮಾಹಿತಿಯ ಮೇರೆಗೆ ಅಸ್ಸಾಂ ರೈಫಲ್ಸ್ ಸಿಬ್ಬಂದಿ, ರಾಜ್ಯ ಅಬಕಾರಿ ಮತ್ತು ಮಾದಕ ದ್ರವ್ಯ ಇಲಾಖೆ ಅಧಿಕಾರಿಗಳು ಮಂಗಳವಾರ ಐಜ್ವಾಲ್‍ನ ಬಾಂಗ್ಕಾವ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ 503 ಗ್ರಾಂ ಹೆರಾಯಿನ್ ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದೆ.

ಮಾದಕ ವಸ್ತು ಹೆರಾಯಿನ್ ಅನ್ನು 40 ಸೋಪ್ ಕೇಸ್‍ಗಳಲ್ಲಿ ಮರೆಮಾಡಲಾಗಿತ್ತು. ಇದರ ಒಟ್ಟು ಮೌಲ್ಯ 2.51 ಕೋಟಿ ರೂಪಾಯಿಗಳಾಗಬಹುದು ಎಂದು ಅಂದಾಜಿಸಲಾಗಿದೆ.

ವೈರಲ್ ಆಯ್ತು ಬಿಜೆಪಿ ಮುಖಂಡನ ಪುತ್ರನ ರೌಡಿಸಂ ವಿಡಿಯೋ

ಮಾದಕ ವಸ್ತುವನ್ನು ಅಬಕಾರಿ ಮತ್ತು ಮಾದಕ ದ್ರವ್ಯ ಇಲಾಖೆಗೆ ಹಸ್ತಾಂತರಿಸಲಾಗಿತ್ತು, ಆರೋಪಿಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

heroin, worth, Rs 2.5 crore, Aizawl,

Articles You Might Like

Share This Article