ಕೋಲ್ಕತ್ತಾ, ಜು.31-ಭಾರಿ ಪ್ರಮಾಣದ ಹಣದೊಂದಿಗೆ ಬಂಗಾಳದಲ್ಲಿ ಬಂತರಾಗಿದ್ದ ಜಾರ್ಖಂಡ್‍ನ ಮೂವರು ಕಾಂಗ್ರೆಸ್ ಶಾಸಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಜಾರ್ಖಂಡ್ ನ ಮೂವರು ಕಾಂಗ್ರೆಸ್‍ನ ಶಾಸಕರಾದ ಇರ್ಫಾನ್ ಅನ್ಸಾರಿ, ರಾಜೇಶ್ ಕಚಾಪ್ ಮತ್ತು ನಮ್ಮ ನಾಮನ್ ಬಿಕ್ಸೋಲ್ ಕಾರಿನಲ್ಲಿ ತೆರಳುತ್ತಿದ್ದಾಗ ನಡೆದ ತಪಾಸಣೆ ವೇಳೆ ಭಾರಿ ಪ್ರಮಾಣ ನಗದು ಪತ್ತೆಯಾಗಿ, ಸಂಚಲನ ಸೃಷ್ಟಿಯಾಗಿತ್ತು.
ಈ ಹಿನ್ನಲೆಯಲ್ಲಿ ಇಂದು ಪತ್ರಿಕಾ ಗೋಷ್ಟಿಯಲ್ಲಿ ಮಾತ ನಾಡಿದ ಜಾರ್ಖಂಡ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉಸ್ತುವಾರಿ ಅವಿನಾಶ್ ಪಾಂಡೆ ನಮ್ಮಲ್ಲಿ ಪ್ರತಿಯೊಬ್ಬರ ಮಾಹಿತಿ ಇದೆ. ಮುಂದಿನ ದಿನಗಳಲ್ಲಿ ಯಾವುದೇ ಸಾರ್ವಜನಿಕ ಪ್ರತಿನಿಯಾಗಲಿ, ಪಕ್ಷದ ಪದಾಧಿಕಾರಿಯಾಗಲಿ ಅಥವಾ ಯಾವುದೇ ಕಾರ್ಯಕರ್ತರಾಗಲಿ, ಯಾರೇ ಸಂಪರ್ಕದಲ್ಲಿ ಅಥವಾ ಶಾಮೀಲಾಗಿದ್ದರೂ ಅವರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರಾದ ಜಾರ್ಖಂಡ್‍ನ ಮೂವರು ಕಾಂಗ್ರೆಸ್ ಶಾಸಕರು ಕಾರಿನಲ್ಲಿ ತೆರಳುತ್ತಿದ್ದಾಗ ತಡೆದು ತಪಾಸಣೆ ನಡೆಸಿದ ವೇಳೆ ಭಾರಿ ಪ್ರಮಾಣ ನಗದು ಪತ್ತೆಯಾಗಿದ್ದು, ಭಾರೀ ಸಂಚಲನ ಸೃಷ್ಟಿಯಾಗಿದೆ.
ಕಾರಿನಲ್ಲಿದ್ದ ಮೂವರು ಶಾಸಕರನ್ನು ಈಗ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಕಳೆದ ರಾತ್ರಿಯಿಂದ ಕಾರಿನಲ್ಲಿ ಸಿಕ್ಕಿರುವ ಹಣವನ್ನು ಎಣಿಸಲಾಗುತ್ತಿದೆ ಹಾಗೂ ಈ ಕುರಿತಂತೆ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಕೊಲಿ ಬೀರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾರ್ಖಂಡ್‍ನ ಕಾಂಗ್ರೆಸ್ ಶಾಸಕರಾದ ಇರ್ಫಾನ್ ಅನ್ಸಾರಿ, ರಾಜೇಶ್ ಕಚಾಪ್ ಮತ್ತು ನಮ್ಮ ನಾಮನ್ ಬಿಕ್ಸೋಲ್ ಅವರು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿಯ ಮೇರೆಗೆ ಅವರನ್ನು ತಡೆದು ಪರಿಶೀಲಿಸಿದಾಗ ಭಾರಿ ಪ್ರಮಾಣದ ಹಣ ಪತ್ತೆಯಾಗಿದೆ. ಈ ಸಂಬಂಧ ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಹೌರ ಜಿಲ್ಲೆಯ ಎಸ್‍ಪಿ ಸ್ವಾತಿ ಬಂಗಾಲಿಯ ತಿಳಿಸಿದ್ದರು.
ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಎಲ್ಲಿಂದ ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು ಎಂಬುದು ಭಾರಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಇನ್ನೊಂದೆಡೆ ಜಾರ್ಖಂಡ್‍ನಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಆಪರೇಷನ್ ಕಮಲದ ಕೃತ್ಯ ಇದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದರೆ ಇತ್ತ ಬಿಜೆಪಿ ಸತ್ಯ ಮರೆಮಾಚಿ ಪರಾಗಲು ಕಾಂಗ್ರೆಸ್ ಹವಣಿಸುತ್ತಿದೆ ಎಂದು ದೂರಿದೆ.
ಇದರ ನಡುವೆ ಶಾಸಕರು ಕಾರಿನಲ್ಲಿ 49 ಲಕ್ಷ ಇತ್ತು. ಅದನ್ನು ನಾವು ಮುಂದಿನ ದಿನಗಳಲ್ಲಿ ನಡೆಯಲಿರುವ ಹಬ್ಬಕ್ಕಾಗಿ ಬುಡಕಟ್ಟು ಸಮುದಾಯಕ್ಕೆ ಸೀರೆ ನೀಡಲು ತೆಗೆದುಕೊಂಡು ಹೋಗುತ್ತಿದ್ದೆವು ಎಂದು ಹೇಳಿದ್ದರು.