Tuesday, February 11, 2025
Homeರಾಷ್ಟ್ರೀಯ | Nationalಮರಕ್ಕೆ ಜೀಪ್ ಡಿಕ್ಕಿಯಾಗಿ ಮೂವರ ಸಾವು

ಮರಕ್ಕೆ ಜೀಪ್ ಡಿಕ್ಕಿಯಾಗಿ ಮೂವರ ಸಾವು

ದಾಮೋಹ್, ಮಾ 26- ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ದೇವದೋಗರ ಗ್ರಾಮದ ಬಳಿ ಜೀಪೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ,ಇಬ್ಬರು ಗಾಯಗೊಂಡಿದ್ದಾರೆ.ಪಟೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ ಎಂದು ಪಟೇರಾ ಪೊಲೀಸ್ ಠಾಣೆ ಉಸ್ತುವಾರಿ ಅಮಿತ್ ಮಿಶ್ರಾ ಹೇಳಿದ್ದಾರೆ.

ವೇಗವಾಗಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

ಇನ್ನೂ ಗಾಯಗೊಂಡ ಇಬ್ಬರನ್ನು ಜಬಲ್‍ಪುರದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು , ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಿಶ್ರಾ ತಿಳಿಸಿದ್ದಾರೆ. ಮೃತರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಅಪಘಾತ ಸಂಭಂದ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

RELATED ARTICLES

Latest News