Saturday, October 19, 2024
Homeರಾಷ್ಟ್ರೀಯ | National14 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ, ಮೂವರ ಸಾವು

14 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ, ಮೂವರ ಸಾವು

3 killed as fire breaks out in multi-storey residential complex in Mumbai

ಮುಂಬೈ,ಅ.16- ಮುಂಬೈನ ಉನ್ನತ ಮಟ್ಟದ ಲೋಖಂಡವಾಲಾ ಕಾಂಪ್ಲೆಕ್ಸ್ ನಲ್ಲಿರುವ 14 ಅಂತಸ್ತಿನ ವಸತಿ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿದ್ದಾರೆ.ಮೃತರನ್ನು ಚಂದ್ರಪ್ರಕಾಶ್‌ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ.

ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್ ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್‌‍ ಕಟ್ಟಡದ 10ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮೂವರಿಗೆ ಗಾಯಗಳಾಗಿದ್ದು, ಕೂಪರ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಳಗ್ಗೆ 9 ಗಂಟೆ ಸುಮಾರಿಗೆ ಬೆಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

RELATED ARTICLES

Latest News