ಶಿಮ್ಲಾ, ಆ.20 -ಹಿಮಾಚಲ ಪ್ರದೇಶದ ಚಂಬಾ ಜಿಲ್ಲೇಯಲ್ಲಿ ಇಂದು ಮುಂಜಾನೆ ಸುರಿದ ಭಾರಿ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಮನೆ ಮಣ್ಣಿನಡೆ ಸಿಲುಕಿ ಮೂವರು ಸಾವನ್ನಪ್ಪಿದ್ದಾರೆ. ತುರ್ತು ಕಾರ್ಯಾಚರಣೆ ಕೇಂದ್ರದ (ಡಿಇಒಸಿ) ಅಧಿಕಾರಿಗಳ ಮಾಹಿತಿ ನೀಡಿ ಬೆಳಿಗ್ಗೆ 4.30 ರ ಸುಮಾರಿಗೆ ಚೌವರಿ ತೆಹಸಿಲನ್‍ಬಾನೆಟ್ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಅವರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಮಂಡಿ ಜಿಲ್ಲೇಯಲ್ಲಿ ಹಠಾತ್ ಪ್ರವಾಹದ ನಂತರ ಅವರ ಮನೆಗಳಿಗೆ, ಅಂಗಡಿಗಳಿಗೆ ನೀರು ನುಗ್ಗಿದ್ದರಿಂದ ಹಲವಾರು ವಾಹನಗಳು ಹಾನಿಗೊಳಗಾಗಿವೆ ಮತ್ತು ಹಲವಾರು ಗ್ರಾಮಸ್ಥರು ನೀರಿನ ಮಧ್ಯೆ ಸಿಲುಕಿಕೊಂಡಿದ್ದಾರೆ. ಹಿಮಾಚಲ ಪ್ರದೇಶದ ವಿಪತ್ತು ನಿರ್ವಹಣಾ ಇಲಾಖೆಯು ರಾಜ್ಯದಲ್ಲಿ ಆಗಸ್ಟ್ 25 ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು ಹಲವೆಡೆ ಭೂಕುಸಿತದ ಎಚ್ಚರಿಕೆಯನ್ನು ನೀಡಿದೆ.
ಕಂಗ್ರಾ, ಚಂಬಾ, ಮಂಡಿ, ಕುಲು, ಶಿಮ್ಲಾ, ಸಿಮರ್, ಸೋಲನï, ಹಮೀಪುರ, ಉನಾ ಮತ್ತು ಬಿಲಾಸ್ಪುರ ಜಿಲ್ಲೇಗಳ ಕೆಲವು ಭಾಗಗಳಲ್ಲಿ ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಮಳೆಯ ಪ್ರಮಾಣವು ಮುಂದಿನ 24 ಗಂಟೆಗಳಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಹೇಳಿದರು.
ಭೂಕುಸಿತಗಳು, ಪ್ರವಾಹ ,ಮೇಘ ಸ್ಫೋಟ, ಬಂಡೆಗಳ ಕುಸಿತ , ನದಿಗಳಲ್ಲಿ ನೀರಿನ ಮಟ್ಟದಲ್ಲಿ ಹಠಾತ್ ಹೆಚ್ಚಳ, ರಾಜ್ಯವನ್ನು ಆತಂಕ ಪಡಿಸಿದೆ ಅಗತ್ಯ ಸೇವೆಗಳಿಗೆ ಅಡ್ಡಿಯುಂಟಾಗಿದೆ.