ಗ್ರೀನ್ ಹೈಡ್ರೋಜನ್ ಪ್ರಾಜೆಕ್ಟ್ ಗೆ 3 ಲಕ್ಷ ಕೋಟಿ : ಸಿಎಂ ಬೊಮ್ಮಾಯಿ

Social Share

ಬೆಂಗಳೂರು,ಫೆ.6- ಗ್ರೀನ್ ಹೈಡ್ರೋಜನ್ ಪವರ್ ಪ್ರಾಜೆಕ್ಟ್‍ಗೆ ರಾಜ್ಯದಲ್ಲಿ ಮೂರು ಲಕ್ಷ ಕೋಟಿ ಬಂಡವಾಳ ಹೂಡಲು ಉದ್ಯಮಿಗಳು ಮುಂದೆ ಬಂದಿದ್ದು, ಕರ್ನಾಟಕ ದೇಶದಲ್ಲೇ ಅತಿಹೆಚ್ಚು ಎಥನಾಲ್ ಉತ್ಪಾದನೆ ಮಾಡುವ ರಾಜ್ಯ ವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಮಾದಾವರ ಬಳಿ ಇರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಆರಂಭವಾದ ಇಂಧನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ತಿಂಗಳು ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶ ಅತಿಹೆಚ್ಚು ಬಂಡವಾಳವನ್ನು ಆಕರ್ಷಿಸಿದೆ ಎಂದು ಹೇಳಿದರು.

ಒಟ್ಟು 9 ಉದ್ಯಮಿಗಳು ರಾಜ್ಯದಲ್ಲಿ ಇಂಧನ ಕ್ಷೇತ್ರಕ್ಕೆ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿವೆ. ಗ್ರೀನ್ ಹೈಡ್ರೋಜನ್ ಪವರ್ ಪ್ರಾಜೆಕ್ಟ್‍ನಲ್ಲಿ ನಮಗೆ ಬಂಡವಾಳ ಹೂಡಿಕೆಯಾಗಲಿದೆ ಎಂದು ಹೇಳಿದರು.

ಪ್ರಜಾಧ್ವನಿ ಯಾತ್ರೆ ಎದುರಾಳಿಗಳಲ್ಲಿ ಭಯ ಸೃಷ್ಟಿಸಿದೆ : ಡಿಕೆಶಿ

ಕರ್ನಾಟಕ ಇಂದು ವಿವಿಧ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಹೊಂದಿದೆ. ಇಂಧನಶಕ್ತಿ ಉತ್ಪಾದನೆಗೆ ಎರಡು ಲಕ್ಷ ಕೋಟಿ ಅನುದಾನವನ್ನು ಮೀಸಲಿಟ್ಟಿದ್ದೇವೆ. ಇಲ್ಲಿರುವಷ್ಟು ಅವಕಾಶಗಳು ಬೇರೆ ಎಲ್ಲಿಯೂ ಇಲ್ಲ ಎಂದರು.
ಕರ್ನಾಟಕ ದೇಶದಲ್ಲೇ ಅತಿಹೆಚ್ಚು ವಿದ್ಯುತ್ ವಾಹನಗಳನ್ನು ಉತ್ಪಾದನೆ ಮಾಡುವ ರಾಜ್ಯವಾಗಿದೆ. ನವೀಕರಣ ಇಂಧನದಲ್ಲಿ ರಾಜ್ಯ ಮುಂದಿದೆ. ನಾವು 15,000 ಮೆಗಾವ್ಯಾಟ್ ವಿದ್ಯುತ್ ತಯಾರಿಸುತ್ತಿದ್ದೇವೆ. ಇಂಧನ ಸಂಗ್ರಹಣೆಯಲ್ಲೂ ನಾವು ಮುಂದಿದ್ದೇವೆ ಎಂದು ಮಾಹಿತಿ ನೀಡಿದರು.

ಮಾಲಿನ್ಯ ರಹಿತ ವಿದ್ಯತ್ ಉತ್ಪಾದನೆ ಮಾಡುವುದು ನಮ್ಮ ಮುಂದಿರುವ ದೊಡ್ಡ ಸವಾಲು. 2044ರ ವೇಳೆಗೆ ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆ ಮಾಡುವ ಗುರಿ ಹಾಕಿಕೊಂಡಿದ್ದೇವೆ. ಶೇ.50ರಷ್ಟನ್ನು ನಾವು ತಲುಪಲಿದ್ದೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಗ್ರೀನ್ ಎನರ್ಜಿಯಲ್ಲೇ 3 ಲಕ್ಷ ಕೋಟಿ ಹೂಡಿಕೆ ಆಗಿದೆ. ಪ್ರಧಾನಿ ನರೇಂದ್ರಮೋದಿ ಅವರು ಗ್ರೀನ್ ಎನರ್ಜಿಯ ಗುರಿ ಹೊಂದಿದ್ದಾರೆ. ಗುಜರಾತ್ ಸಿಎಂ ಆಗಿದ್ದಾಗಲೇ ಈ ಕನಸು ಕಂಡಿದ್ದರು. ಕರ್ನಾಟಕದಲ್ಲಿ ಗ್ರೀನ್ ಎನರ್ಜಿಗೆ ದೊಡ್ಡ ಅವಕಾಶ ಇದೆ ಎಂದು ಹೇಳಿದರು.

ರಾಜ್ಯದಲ್ಲಿ ಇಂದು ಇಂಧನ ಸಪ್ತಾಹ ಆಚರಿಸಲಾಗುತ್ತಿದೆ. ಇಂಧನ ಸಪ್ತಾಹ ಆಚರಿಸುತ್ತಿರುವುದಕ್ಕೆ ನನ್ನ ಧನ್ಯವಾದ. ಕೊರೊನಾ ನಂತರ ಜೀವನದ ವ್ಯಾಖ್ಯಾನ ಬದಲಾಗಿದೆ. ಹೊಸ ಗುರಿ ಇಟ್ಟುಕೊಂಡು ಸಾಗುತ್ತಿದ್ದೇವೆ ಎಂದರು.

ಕೇಂದ್ರ ವಿದ್ಯುತ್ ಸಚಿವ ಹರದೀಪ್ ಸಿಂಗ್ ಪುರಿ ಮಾತನಾಡಿ, ದೇಶದ ವಿವಿಧೆಡೆ ಒಟ್ಟು 69 ಎಥನಾಲ್ ಬಂಕ್‍ಗಳನ್ನು ತೆರೆಯಲಾಗಿದೆ. ಇವುಗಳು ಇನ್ನಷ್ಟು ಹೆಚ್ಚಳವಾಗಲಿದೆ. ಸಾರ್ವಜನಿಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅವರು ನಮಗೆ ಗುರಿಯೊಂದನ್ನು ನೀಡಿದ್ದರು. ನಾವು ಅದಕ್ಕೂ ಮೂರು ವರ್ಷ ಮುನ್ನವೇ ತಲುಪಿದ್ದೇವೆ. 2020ರ ವೇಳೆಗೆ ಶೇ.20ರಷ್ಟು ಎಥನಾಲ್ ಬಳಕೆ ಮಾಡಬೇಕೆಂಬ ಗುರಿ ಇದೆ. ಖಂಡಿತವಾಗಿಯೂ ತಲುಪಲಿದ್ದೇವೆ ಎಂದು ಹೇಳಿದರು.

ಪೆಟ್ರೋಲ್ ಮತ್ತು ಡೀಸೆಲ್ ಪರ್ಯಾಯವಾಗಿ ಎಥನಾಲ್ ಬಳಕೆ ಹೆಚ್ಚು ಒತ್ತು ಕೊಡಬೇಕೆಂಬ ಗುರಿ ಇದೆ. ಎಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರು ಕೂಡ ಸ್ವಯಂಪ್ರೇರಿತರಾಗಿ ಇದನ್ನು ಹೆಚ್ಚು ಬಳಸಬೇಕು. ಈ ಬಗ್ಗೆ ಇನ್ನಷ್ಟು ಜಾಗೃತಿ ಮೂಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ದೇಶದಲ್ಲಿ ಎಲ್ಲರಿಗೂ ಕೈಗೆಟುಕುವ ದರದಲ್ಲಿ ಇಂಧನ ಒದಗುವಂತೆ ಮಾಡಲು ಹಲವು ಕ್ರಮಗಳ ಕೈಗೊಳ್ಳಲಾಗುತ್ತಿದೆ. ಪರಿಸರ ಸ್ನೇಹಿ ಇಂಧನ ಬಳಕೆಗೆ ಹೊಸ ವೇಗ ನೀಡುವ ಪ್ರಯತ್ನ ಇದಾಗಿದೆ ಎಂದು ಹೇಳಿದರು.
2030ರ ಒಳಗೆ ಭಾರತದಲ್ಲಿ ವಾಯುಮಾಲಿನ್ಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಸತತ ಪರಿಶ್ರಮ ಹಾಕುತ್ತಿದೆ. ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಸರ ಸ್ನೇಹಿ ಇಂಧನಕ್ಕೆ ನಾವು ಆದ್ಯತೆ ನೀಡಿದ್ದೇವೆ. ಆದರೆ ಅಭಿವೃದ್ಧಿಯ ವಿಚಾರದಲ್ಲಿ ರಾಜಿಯಾಗುತ್ತಿಲ್ಲ ಎಂದು ವಿವರಿಸಿದರು.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆ ಮಾರ್ಚ್‍ಗೆ ಉದ್ಘಾಟನೆ

ಪರಿಸರ ಮಾಲಿನ್ಯ ತಗ್ಗಿಸುವುದನ್ನು ನಮ್ಮ ಸರ್ಕಾರ ಆದ್ಯತೆಯಾಗಿ ಪರಿಗಣಿಸಿದೆ. ಹಸಿರು ಇಂಧನದ ಬಗ್ಗೆ ಬಜೆಟ್ ಭಾಷಣದಲ್ಲಿಯೂ ಪ್ರಸ್ತಾಪಿಸಲಾಗಿತ್ತು. ದೊಡ್ಡ ಮೊತ್ತದ ಅನುದಾನವನ್ನು ಈ ಕ್ಷೇತ್ರಕ್ಕೆ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಶೂನ್ಯ ಇಂಗಾಲ ಹೊರಸೂಸುವಿಕೆ ಆಶಯ ಸಾಕಾರಗೊಳಿಸಲು ನಾವು ಶ್ರಮಿಸಬೇಕಿದೆ. ಅದು ನಮ್ಮ ಆದ್ಯತೆಯಾಗಬೇಕು ಎಂದು ತಿಳಿಸಿದರು.

ಸೂರ್ಯನ ಬೆಳಕಿನಿಂದ ಅಡುಗೆ ಮಾಡುವ ಸೋಲಾರ್ ಕುಕ್‍ಟಾಪ್‍ಗಳ ಬಳಕೆಗೆ ಇಂದು ಚಾಲನೆ ಸಿಗಲಿದೆ. ಈ ತಂತ್ರಜ್ಞಾನವನ್ನು ಭಾರತ ಹಂಚಿಕೊಳ್ಳಲಿದೆ. ಇದನ್ನು ಯಥಾವತ್ತಾಗಿ ಏಷ್ಯಾದ ಇತರ ದೇಶಗಳೂ ಬಳಸಬಹುದಾಗಿದೆ. ತ್ಯಾಜ್ಯ ಪೆಟ್ ಬಾಟಲಿಗಳಿಂದ ಹಲವು ಉತ್ಪನ್ನಗಳನ್ನು ತಯಾರಿಸುವ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದೆ. ಪರಿಸರ ಮಾಲಿನ್ಯ ತಗ್ಗಿಸಲು ಇದು ನೆರವಾಗಲಿದೆ ಎಂದು ಹೇಳಿದರು.

ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮ ವಿಧಿವಶ

ಜೈವಿಕ ಇಂಧನಕ್ಕೆ ಭಾರತ ಸರ್ಕಾರವು ಉತ್ತೇಜನ ನೀಡುತ್ತಿದೆ. ಕೆಲವು ಪೆಟ್ರೋಲ್ ಪಂಪ್‍ಗಳಲ್ಲಿ ಜೈವಿಕ ಇಂಧನ ಬೆರೆತ ಪೆಟ್ರೋಲಿಯಂ ಉತ್ಪನ್ನಗಳು ಲಭ್ಯವಾಗಲಿವೆ. ಹೊಸ ತಂತ್ರಜಜ್ಞಾನದ ಮೂಲಕ ನಿರ್ಮಾಣವಾದ ಪರಿಸರ ಸ್ನೇಹಿ ವಾಹನಗಳಿಗೂ ಪ್ರಧಾನಿ ಇಂದು ಹಸಿರು ನಿಶಾನೆ ಕೊಟ್ಟಿದ್ದಾರೆ ಎಂದು ಹರ್‍ದೀಪ್ ಸಿಂಗ್ ತಿಳಿಸಿದರು.

3 lakh crore, green, hydrogen, project, CM Bommai,

Articles You Might Like

Share This Article