ಕಾಂಗ್ರೆಸ್ ಪಾದಯಾತ್ರೆ ತಡೆಯಲು 3 ಸಾವಿರ ಪೊಲೀಸರ ನಿಯೋಜನೆ

Social Share

ಬೆಂಗಳೂರು, ಅ.13- ಕಾಂಗ್ರೆಸ್ ಪಾದಯಾತ್ರೆ ತಡೆಯಲು ಸಕಲ ಸಿದ್ಧತೆ ಮಾಡಿಕೊಂಡಿರುವ ಪೊಲೀಸರು ಎಡಿಜಿಪಿ ನೇತೃತ್ವದಲ್ಲಿ ಸುಮಾರು 3 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ನ್ಯಾಯಾಲಯ ಆದೇಶದ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ತಡೆಯುವ ಅನಿವಾರ್ಯತೆ ಸರ್ಕಾರಕ್ಕೆ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಐಜಿ ಲೋಕೇಶ್, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಗಿರೀಶ್ ಅವರು ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಮುಖಂಡರ ಜೊತೆ ಚರ್ಚೆ ನಡೆಸಿದರು. ಕಾಂಗ್ರೆಸ್ ನಾಯಕರು ಆಂತರಿಕ ಸಭೆ ನಡೆಸಿ ನಂತರ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದರು.
ಇದಕ್ಕೂ ಮುನ್ನಾ ರಾಮನಗರದ ಕಾಗೇಪುರಗೇಟ್ ಬಳಿ ಭಾರೀ ಸಂಖ್ಯೆಯಲ್ಲಿ ಪೊಲೀಸರು ಜಮಾವಣೆ ತೆಗೆದುಕೊಂಡಿದ್ದರು. ಇಂದು ಪಾದಯಾತ್ರೆಯಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸುತ್ತಿದ್ದ ಕಾರ್ಯಕರ್ತರನ್ನು ರಾಮನಗರ ಜಿಲ್ಲೆಯಲ್ಲಿ ಗಡಿ ಭಾಗದಲ್ಲೇ ತಡೆಯಲಾಯಿತು.
ರಾಮನಗರವನ್ನು ಸಂಪರ್ಕಿಸುವ ಕುಣಿಗಲ್, ಮಾಗಡಿ, ಮದ್ದೂರು, ಚೆನ್ನಪಟ್ಟಣ ಮಾರ್ಗಗಳಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಿ ಪ್ರತಿಯೊಂದು ವಾಹನವನ್ನು ತಡೆದು ಪರಿಶೀಲಿಸಲಾಯಿತು.
ಪಾದಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿ ಕಾರ್ಯಕರ್ತರನ್ನು ದಾರಿ ಮಧ್ಯೆಯೇ ತಡೆದು ನಿಲ್ಲಿಸಲಾಯಿತು. ಮಾಧ್ಯಮದವರನ್ನು ಹೊರಗೆ ಕಳುಹಿಸಿ ಸಭೆ ನಡೆಸಲಾಯಿತು.

Articles You Might Like

Share This Article