ಲಾರ್ಡ್ಸ್ , ಜು.13- ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲೂ ಭರ್ಜರಿ ಶತಕ ಸಿಡಿಸಿರುವ ಕನ್ನಡಿಗ ಕೆ.ಎಲ್.ರಾಹುಲ್ ಅವರು ಈ ಬಾರಿ ಹಲವು ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ 177 ಎಸೆತಗಳಲ್ಲಿ 13 ಫೋರ್‌ಗಳೊಂದಿಗೆ 100 ರನ್ ಬಾರಿಸಿದ್ದಾರೆ. ಈ ಶತಕದೊಂದಿಗೆ ಕನ್ನಡಿಗನ ಹೆಸರಿಗೆ ಹಲವು ದಾಖಲೆಗಳು ಸೇರ್ಪಡೆಯಾಗಿದೆ. ಆ ದಾಖಲೆಗಳ ಸಂಕ್ಷಿಪ್ತ ವಿವರ ಈ ರೀತಿ ಇದೆ.
ಲಾರ್ಡ್ಸ್ ನಲ್ಲಿ ಅತ್ಯಧಿಕ ಸೆಂಚುರಿ:
ಟೀಮ್ ಇಂಡಿಯಾ ಪರ ಲಾರ್ಡ್ಸ್ ಮೈದಾನದಲ್ಲಿ 2 ಶತಕ ಸಿಡಿಸಿದ 2ನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ಕೆಎಲ್ ರಾಹುಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ದಿಲೀಪ್ ವೆಂಗ್‌ಸರ್ಕಾರ್ ಅವರು ಲಾರ್ಡ್‌್ಸನಲ್ಲಿ 3 ಶತಕ ಸಿಡಿಸಿದ್ದರು. ಇದೀಗ 2ನೇ ಶತಕದೊಂದಿಗೆ ಕೆಎಲ್ ರಾಹುಲ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ನಾಲ್ಕು ಶತಕಗಳು:
ಆಂಗ್ಲರ ನಾಡಿನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಬ್ಯಾಟ್‌ನಿಂದ ಈವರೆಗೆ 4 ಟೆಸ್ಟ್ ಶತಕಗಳು ಮೂಡಿಬಂದಿವೆ. ಈ ಮೂಲಕ ಓಪನರ್ ಆಗಿ ಹೊಸ ಇತಿಹಾಸ ನಿರ್ಮಿಸುವಲ್ಲಿ ಅವರು ಯಶಸ್ವಿಯಾಗಿದ್ದಾರೆ.
ಲಾರ್ಡ್ಸ್ ನಲ್ಲಿ ಲಾರ್ಡ್:
ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ 2 ಶತಕ ಸಿಡಿಸಿದ ಭಾರತದ ಮೊದಲ ಆರಂಭಿಕ ದಾಂಡಿಗ ಎಂಬ ದಾಖಲೆ ಕೂಡ ಕೆಎಲ್ ರಾಹುಲ್ ಪಾಲಾಗಿದೆ. ಇದಕ್ಕೂ ಮುನ್ನ 2021 ರಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ 129 ರನ್‌ಗಳ ಇನಿಂಗಸ್ ಆಡಿದ್ದರು. ಇದೀಗ ಮತ್ತೊಮ್ಮೆ ಸೆಂಚುರಿ ಸಿಡಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಸೆಂಚುರಿಗಳ ಸರದಾರ:
ಇಂಗ್ಲೆಂಡ್‌ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕೆಎಲ್ ರಾಹುಲ್ ಸಚಿನ್ ತೆಂಡೂಲ್ಕರ್, ದಿಲೀಪ್ ವೆಂಗ್‌ಸರ್ಕಾರ್ ಮತ್ತು ರಿಷಭ್ ಪಂತ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಇವರೆಲ್ಲರೂ ಆಂಗ್ಲರ ನಾಡಿನಲ್ಲಿ 6 ಶತಕ ಬಾರಿಸಿದ ದಾಖಲೆ ಹೊಂದಿದ್ದಾರೆ.
ರನ್ ಸರದಾರ:
ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ ದೇಶಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಅತೀ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕೆಎಲ್ ರಾಹುಲ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ರಾಹುಲ್ ವಿದೇಶಗಳಲ್ಲಿ ಈವರೆಗೆ ಒಟ್ಟು 1608 ರನ್‌ಗಸಿದ್ದಾರೆ. ಈ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್ (2464 ರನ್‌ಗಳು) ಅಗ್ರಸ್ಥಾನದಲ್ಲಿದ್ದಾರೆ.
ಹತ್ತನೇ ಶತಕ:
ಕೆಎಲ್ ರಾಹುಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಈವರೆಗೆ 10 ಶತಕ ಸಿಡಿಸಿದ್ದಾರೆ. ಇದರಲ್ಲಿ 9 ಸೆಂಚುರಿಗಳು ಮೂಡಿಬಂದಿರುವುದು ವಿದೇಶದಲ್ಲಿ ಎಂಬುದು ವಿಶೇಷ. ಈ ಮೂಲಕ ಮೊದಲ 10 ಶತಕಗಳನ್ನು ಅತೀ ಹೆಚ್ಚು ವಿದೇಶಿ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ಕೆಎಲ್ ರಾಹುಲ್ ತಮ್ಮದಾಗಿಸಿಕೊಂಡಿದ್ದಾರೆ.
- ಪೊಲೀಸ್ ಕಸ್ಟಡಿ ಸಾವು ವಿರೋಧಿಸಿ ಬೀದಿಗಿಳಿದ ವಿಜಯ್
- ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರ ಆತ್ಮಹತ್ಯೆ
- ಬೆಳಗಾವಿ : ನಡು ರಸ್ತೆಯಲ್ಲೇ ಯುವ ಗಾಯಕನ ಬರ್ಬರ ಹತ್ಯೆ
- ಕಿರು ತೆರೆ ನಟಿ ಶ್ರುತಿ ಮೇಲಿನ ಹಲ್ಲೆಗೆ ನೈಜ ಕಾರಣ ಬಿಚ್ಚಿಟ್ಟ ಪತಿ
- ಬಿಹಾರ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ..!