Sunday, August 3, 2025
Homeರಾಷ್ಟ್ರೀಯ | National'ಆಪರೇಷನ್‌ ಅಖಾಲ್‌' ಮೂಲಕ ಮೂವರು ಉಗ್ರರನ್ನು ಹೊಸಕಿಹಾಕಿದ ಸೇನೆ

‘ಆಪರೇಷನ್‌ ಅಖಾಲ್‌’ ಮೂಲಕ ಮೂವರು ಉಗ್ರರನ್ನು ಹೊಸಕಿಹಾಕಿದ ಸೇನೆ

3 terrorists killed, soldier injured as Operation Akhal in J&K enters Day 3

ಶ್ರೀನಗರ, ಆ.3- ಮುಂದುವರೆದ ಆಪರೇಷನ್‌ ಅಖಾಲ್‌ ಕಾರ್ಯಚರಣೆಗೆ ಮತ್ತೆ ಮೂವರು ಉಗ್ರರು ಬಲಿಯಾಗಿದ್ದಾರೆ. ಇದರ ಜೊತೆಗೆ ಸೇನಾ ಯೋಧನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ವರ್ಷದ ಅತಿದೊಡ್ಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಒಂದಾದ ಆಪರೇಷನ್‌ ಅಖಾಲ್‌ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬ ಸೈನಿಕ ಗಾಯಗೊಂಡಿದ್ದಾರೆ.
ಭದ್ರತಾ ಪಡೆಗಳು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ ಒಟ್ಟು ಭಯೋತ್ಪಾದಕರ ಸಂಖ್ಯೆ ಆರಕ್ಕೆ ತಲುಪಿದೆ.ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯ ಅಖಾಲ್‌ ಅರಣ್ಯ ಪ್ರದೇಶದಲ್ಲಿ ರಾತ್ರಿಯಿಡೀ ಸ್ಫೋಟಗಳು ಮತ್ತು ಗುಂಡಿನ ಶಬ್ದಗಳು ಮುಂದುವರೆದವು.

ಭಯೋತ್ಪಾದಕರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್‌‍, ಸೇನೆ ಮತ್ತು ಸಿಆರ್‌ಪಿಎಫ್‌ನ ಜಂಟಿ ತಂಡದ ನಡುವಿನ ಎನ್‌ಕೌಂಟರ್‌ ಇನ್ನೂ ನಡೆಯುತ್ತಿದೆ.
ಅಖಾಲ್‌ ಅರಣ್ಯದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಸುತ್ತುವರಿದ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.ಅರಣ್ಯದೊಳಗೆ ಅಡಗಿಕೊಂಡಿದ್ದ ಭಯೋತ್ಪಾದಕರ ಗುಂಪೊಂದು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಎನ್‌ಕೌಂಟರ್‌ ನಡೆಯಿತು.

ಆರಂಭಿಕ ಗುಂಡಿನ ಚಕಮಕಿಯ ನಂತರ, ಶುಕ್ರವಾರ ರಾತ್ರಿ ಕಾರ್ಯಾಚರಣೆಯನ್ನು ನಿಲ್ಲಿಸಲಾಯಿತು. ಶನಿವಾರ ಮತ್ತೆ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದವು.

ಶನಿವಾರ ಕೊಲ್ಲಲ್ಪಟ್ಟ ಭಯೋತ್ಪಾದಕರು ನಿಷೇಧಿತ ಲಷ್ಕರ್‌-ಎ-ತೈಬಾ (ಎಲ್‌ಇಟಿ) ಯ ಒಂದು ಭಾಗವಾದ ದಿ ರೆಸಿಸ್ಟೆನ್‌್ಸ ಫ್ರಂಟ್‌ (ಟಿಆರ್‌ಎಫ್‌‍) ಗೆ ಸೇರಿದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 26 ನಾಗರಿಕರ ಸಾವಿಗೆ ಕಾರಣವಾದ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಜವಾಬ್ದಾರಿಯನ್ನು ಈ ಸಂಘಟನೆ ಹೊತ್ತುಕೊಂಡಿತ್ತು.ಹೈಟೆಕ್‌ ಕಣ್ಗಾವಲು ವ್ಯವಸ್ಥೆಗಳು ಮತ್ತು ಗಣ್ಯ ಅರೆಸೈನಿಕ ಪಡೆಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ.

RELATED ARTICLES

Latest News