ಲಕ್ನೋ, ಅ.4 (ಪಿಟಿಐ) – ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಇಲ್ಲಿನ ಲಕ್ನೋ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ ಮೂವತ್ತು ಮಂದಿ ಭದ್ರತಾ ಪಡೆ ಸಿಬ್ಬಂಧಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾರೆ.
ಅವರಲ್ಲಿ ಒಬ್ಬರು ಅನಾರೋಗ್ಯಕ್ಕೆ ಒಳಗಾಗುವಂತೆ ನಟಿಸಿ ಗೊಂದಲ ಸೃಷ್ಟಿಸಿದ್ದು ಇದಕ್ಕೆ ಕಾರಣವಾಗಿದೆ. ಆರೋಪಿಗಳ ಪತ್ತೆಗೆ ಕಸ್ಟಮ್ಸ್ ಮತ್ತು ಪೊಲೀಸ್ ಅಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಂದಾಯ ಗುಪ್ತಚರ ನಿರ್ದೇಶನಾಲಯ ಮತ್ತು ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಕಳೆದ ಸೋಮವಾರ ಶಾರ್ಜಾದಿಂದ ಲಕ್ನೋದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರಲ್ಲಿ 36 ಮಂದಿ ತಪಾಸಣೆಗೆ ಒಳಪಡಿಸಿದಾಗ, ಕೆಲವರಿಂದ 3 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸಿಗರೇಟ್ ಮತ್ತು 23.90 ಲಕ್ಷ ರೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಶಶಾಂಕ್ ಸಿಂಗ್ ಹೇಳಿದ್ದಾರೆ.
ಇವರ ತಂಡ ಚಿನ್ನ ಕಳ್ಳಸಾಗಣೆ ಮಾಡುತ್ತಿರುವುದುತಿಳಿದು 30 ಪ್ರಯಾಣಿಕರನ್ನು ವಿಚಾರಣೆಗೆ ಒಳಪಡಿಸಿದಾಗ ಅವರಲ್ಲಿ ಒಬ್ಬರು ಅಸ್ವಸ್ಥರಂತೆ ನಟಿಸಿ ಗೊಂದಲ ಸೃಷ್ಟಿಸಿದ್ದರು. ಇದರ ಲಾಭ ಪಡೆದು ಎಲ್ಲರೂ ಪರಾರಿಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಬಂಧಿಸಲಾಗಿರುವ 6 ಮಂದಿಯ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲಾಗುತ್ತಿದೆ.