ಬೆಂಗಳೂರು, ಅ.28- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕರು ಹಾಗೂ ಸವಾರರ ವಿರುದ್ಧ ನಗರ ಸಂಚಾರಿ ಪೊಲೀಸರು ನಗರದಾದ್ಯಂತ ವಿಶೇಷ ಕಾರ್ಯಾಚರಣೆ ಕೈಗೊಂಡು ಒಂದು ವಾರದ ಅವಧಿಯಲ್ಲಿ 314 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ನಗರ ಸಂಚಾರಿ ಪೊಲೀಸ್ ವಿಭಾಗವೂ ಅ. 21ರಿಂದ 27ರವರೆಗೆ ಕಾರ್ಯಾಚರಣೆ ಕೈಗೊಂಡು 25383 ವಿವಿಧ ಮಾದರಿಯ ವಾಹನಗಳನ್ನು ಪರಿಶೀಲಿಸಿ ನಿಯಮ ಉಲ್ಲಂಘಿಸಿದ 314 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ರಸ್ತೆ ಅಪಘಾತವನ್ನು ತಡೆಗಟ್ಟುವ ಸಲುವಾಗಿ ಇಂತಹ ವಿಶೇಷ ಕಾರ್ಯಾಚರಣೆಯನ್ನು ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ಹಮಿಕೊಳ್ಳಲಾಗುವುದು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.