ಬೆಂಗಳೂರು, ಮಾ.6- ಸಾರ್ವಜನಿಕರಿಗೆ ನಿಷೇಧಿತ ಮಾದಕವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಜೆಜೆ ನಗರ ಠಾಣೆ ಪೊಲೀಸರು 32 ಕೆಜಿ 40 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ 1 ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ರಾಮನಗರ ನಿವಾಸಿ ಹವಾಬ್, ಬೆಂಗಳೂರು ನಗರ ನಿವಾಸಿ ಮನ್ಸೂರ್ ಬಂಧಿತ ಆರೋಪಿಗಳು.
ಜೆಜೆ ನಗರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಆರೋಪಿಯೊಬ್ಬ ದ್ವಿಚಕ್ರ ವಾಹನದಲ್ಲಿ ನಿಷೇತ ಮಾದಕವಸ್ತು ಗಾಂಜಾ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾನೆಂದು ಬಂದ ಮಾಹಿತಿ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮತ್ತೊಬ್ಬ ಆರೋಪಿ ಬಗ್ಗೆ ಮಾಹಿತಿ ನೀಡಿದ್ದಾನೆ.
ಇಬ್ಬರನ್ನು ಬಂಧಿಸಿ ಬಚ್ಚಿಟ್ಟಿದ್ದ 32 ಕೆಜಿ 40 ಗ್ರಾಂ ತೂಕದ ಮಾದಕ ಗಾಂಜಾವನ್ನು ಹಾಗೂ ಕೃತ್ಯಕ್ಕೆ ಉಪಯೋಗಿಸಿದ್ದ ಒಂದು ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ಸ್‍ಪೆಕ್ಟರ್ ಡಿ.ಸಿ.ಮಂಜು ಮತ್ತು ಸಿಬ್ಬಂದಿ ವರ್ಗ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
