Friday, September 20, 2024
Homeಇದೀಗ ಬಂದ ಸುದ್ದಿಕೇಂದ್ರದಿಂದ ಕೊಬ್ಬರಿ ಖರೀದಿ, ತುಮಕೂರು ರೈತರ ಖಾತೆಗೆ 346 ಕೋಟಿ ನೇರ ಪಾವತಿ

ಕೇಂದ್ರದಿಂದ ಕೊಬ್ಬರಿ ಖರೀದಿ, ತುಮಕೂರು ರೈತರ ಖಾತೆಗೆ 346 ಕೋಟಿ ನೇರ ಪಾವತಿ

ಬೆಂಗಳೂರು,ಆ.6- ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸಲ್ಪಟ್ಟ ಉಂಡೆ ಕೊಬ್ಬರಿ ಮೊತ್ತ 346.50 ಕೋಟಿ ರೂ. ರೈತರ ಖಾತೆಗೆ ನೇರವಾಗಿ ಪಾವತಿಸಲಾಗಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

2024ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು 27,000 ರೈತರಿಂದ ಒಟ್ಟು 3,15,000 ಕ್ವಿಂಟಾಲ್‌ ಉಂಡೆ ಕೊಬ್ಬರಿಯನ್ನು ಕನಿಷ್ಟ ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲಾಗಿತ್ತು. ಈ ಸಂಬಂಧ ಒಟ್ಟು ಬಾಬ್ತು ರೂ.378 ಕೋಟಿಗಳನ್ನು ತುಮಕೂರಿನ ಕೊಬ್ಬರಿ ಬೆಳೆಗಾರರಿಗೆ ಪಾವತಿಸ ಬೇಕಾಗಿತ್ತು.

ಈ ಸಂಬಂಧ 2024 ಆಗಸ್ಟ್‌ 5ರ ವರೆಗೆ ಸುಮಾರು 346.50 ಕೋಟಿ ಮೊತ್ತವನ್ನು (ಪ್ರತಿಶತ 92 ರಷ್ಟು) ರೈತರ ಖಾತೆಗೆ ನೇರವಾಗಿಪಾವತಿಸಲಾಗಿದೆ.ಶೀಘ್ರ ಹಣ ಪಾವತಿಗೆ ಸಚಿವ ಸೋಮಣ್ಣಅವರ ಮನವಿ ಮಾಡಿದ್ದರು.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು ಸುಮಾರು 24600 ರೈತರಿಗೆ ಈ ಬಾಬ್ತು ನೇರವಾಗಿ ಡಿಬಿಟಿ ಮೂಲಕ ರೈತರ ಖಾತೆಗೆ ಪಾವತಿಸ ಲಾಗಿದೆಯೆಂದು ತಿಳಿಸಿದ್ದಾರೆ,ಬಾಕಿ ಉಳಿದ ಸುಮಾರು 2438 ರೈತರ ಖಾತೆಗೆ ಇನ್ನು 31.64ಕೋಟಿ ಬಾಬ್ತನ್ನು ರೈತರಿಗೆ ಪಾವತಿಸಬೇಕಾಗಿದೆ ಇದು ಅತೀ ಶೀಘ್ರದಲ್ಲಿ ತುಮಕೂರಿನ ರೈತರಿಗೆ ಪಾವತಿಸುವಂತೆ ರಾಜ್ಯದಲ್ಲಿನ ಸಂಬಂಧಪಟ್ಟ ಏಜೆನ್ಸಿಗೆ ನಿರ್ದೆಶನ ನೀಡಲಾಗಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಕೇಂದ್ರದಲ್ಲಿನ ನೆಫೆಡ್ ಸಂಸ್ಥೆಯಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಮೊತ್ತ ರೂ.691 ಕೋಟಿಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲು ಕ್ರಮ ಜರುಗಿಸಬೇಕೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದಾಗಿ
ಸಚಿವ ಸೋಮಣ್ಣ ಅವರು ತಿಳಿಸಿದ್ದಾರೆ.

ರೈತರ ಖಾತೆಗೆ ಹಣ ಸಂದಾಯವಾದ ಬಗ್ಗೆ ಸಂತಸ ವ್ಯಕ್ತಪಡಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ತುಮಕೂರಿನ ರೈತರ ಪರವಾಗಿ ಧನ್ಯವಾದ ತಿಳಿಸಿದ್ದಾರೆ.

RELATED ARTICLES

Latest News