Sunday, April 28, 2024
Homeರಾಜ್ಯ3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ

3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ

ಬೆಂಗಳೂರು, ನ.29-ಬೃಹತ್ ಮತ್ತು ಕೈಗಾರಿಕೆ, ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ 141ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 3,607.19 ಕೋಟಿ ರೂ.ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 10,755 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

50 ಕೋಟಿ ರೂ.ಗೂ ಹೆಚ್ಚಿನ ಬಂಡವಾಳ ಹೂಡಿಕೆಯ 8 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ 2,088.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯಾಗಲಿದೆ. ಇವುಗಳಿಂದ 6,360 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

15 ಕೋಟಿ ರೂ. ಗಳಿಂದ 50 ಕೋಟಿ ರೂ. ಮೊತ್ತದ ಒಳಗಿನ ಬಂಡವಾಳ ಹೂಡಿಕೆಯ 51 ಹೊಸ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಂದ 941.40 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಅಂದಾಜು 4,395 ಜನರಿಗೆ ಉದ್ಯೋಗಗಳು ಲಭ್ಯವಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳಿಗೆ ಸಭೆಯು ಅನುಮೋದಿಸಿದ್ದು ಇದರಿಂದ 577.35 ಕೋಟಿ ರೂ. ಬಂಡವಾಳ ಹೂಡಿಕೆ ಆಗಲಿದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-11-2023)

ಸಭೆಯಲ್ಲಿ ಸರ್ಕಾರದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತಗುಂಜನ್ ಕೃಷ್ಣ, ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ರವಿ ಬಿ.ಪಿ. ಕೆ.ಐ.ಎ.ಡಿ.ಬಿ ಮುಖ್ಯ ಕಾರ್ಯನಿರ್ವಾಹಕ ಅಕಾರಿ ಡಾ. ಎಂ. ಮಹೇಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ತಾಂತ್ರಿಕ ನಿರ್ದೇಶಕ ಆರ್. ರಮೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಕಾರಿಗಳು ಹಾಜರಿದ್ದರು.

RELATED ARTICLES

Latest News