ಲೋಕಸಭಾ ಚುನಾವಣೆ : ರಾಜ್ಯದಲ್ಲಿ 276 ಅಭ್ಯರ್ಥಿಗಳ 384 ನಾಮಪತ್ರಗಳು ಪುರಸ್ಕೃತ

ಬೆಂಗಳೂರು,ಏ.6- ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಹೊರತುಪಡಿಸಿ ರಾಜ್ಯದ ಮೊದಲ ಹಂತದ 13 ಲೋಕಸಭಾ ಕ್ಷೇತ್ರಗಳಲ್ಲಿ ನಿನ್ನೆ ನಾಮಪತ್ರಗಳ ಪರಿಶೀಲನೆ ಪೂರ್ಣಗೊಂಡಿದ್ದು, 60 ನಾಮಪತ್ರಗಳು ತಿರಸ್ಕೃತಗೊಂಡಿವೆ. 276 ಅಭ್ಯರ್ಥಿಗಳ 384 ನಾಮಪತ್ರಗಳು ಪುರಸ್ಕೃತಗೊಂಡಿವೆ. ಮಾ.28ರಿಂದ ಏ.4ರವರೆಗೆ 358 ಅಭ್ಯರ್ಥಿಗಳು 492 ನಾಮಪತ್ರಗಳನ್ನು ಸಲ್ಲಿಸಿದ್ದರು. ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ನಾಮಪತ್ರಗಳು ಪುರಸ್ಕೃತಗೊಂಡಿವೆ. ತಿರಸ್ಕೃತಗೊಂಡಿರುವ ನಾಮಪತ್ರಗಳಲ್ಲಿ ಪಕ್ಷೇತರರೇ ಹೆಚ್ಚಾಗಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಏ.8ರವರೆಗೆ ಕಾಲಾವಕಾಶವಿದ್ದು, ಆನಂತರ ಚುನಾವಣಾ ಕಣದಲ್ಲಿ ಉಳಿಯುವ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಉಡುಪಿ-ಚಿಕ್ಕಮಗಳೂರು … Continue reading ಲೋಕಸಭಾ ಚುನಾವಣೆ : ರಾಜ್ಯದಲ್ಲಿ 276 ಅಭ್ಯರ್ಥಿಗಳ 384 ನಾಮಪತ್ರಗಳು ಪುರಸ್ಕೃತ