ಕಳ್ಳತನ ಮಾಡಿದ್ದ 5.20 ಲಕ್ಷ ಮೌಲ್ಯದ 4 ಬೈಕ್‍ ಜಪ್ತಿ, ಆರೋಪಿ ಅರೆಸ್ಟ್

ಬೆಂಗಳೂರು, ನ.2- ಮನೆಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿ 5.20 ಲಕ್ಷ ಮೌಲ್ಯದ 4 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ನದೀಂ ಮಹಮ್ಮದ್ ಬಂತ ಆರೋಪಿ. ಅಕ್ಟೋಬರ್ 7ರಂದು ರಾತ್ರಿ 9.30ರ ಸುಮಾರಿನಲ್ಲಿ ವ್ಯಕ್ತಿಯೊಬ್ಬರು ತಮ್ಮ ಹೋಂಡಾ ಆ್ಯಕ್ಟೀವಾ ಸ್ಕೂಟರ್‍ಅನ್ನು ಮನೆ ಮುಂದೆ ನಿಲ್ಲಿಸಿದ್ದರು. ಮಾರನೆ ದಿನ ಬೆಳಗ್ಗೆ ಎದ್ದು ನೋಡುವಷ್ಟರಲ್ಲಿ ಸ್ಕೂಟರ್ ಕಳ್ಳತನವಾಗಿತ್ತು. ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇನ್ಸ್‍ಪೆಕ್ಟರ್ ವಸಂತ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಪತ್ತೆಹಚ್ಚಿ ಬಂಸಿ ತೀವ್ರ ವಿಚಾರಣೆಗೊಳಪಡಿಸಿದಾಗ, ಕೆಂಗೇರಿ, ಬ್ಯಾಡರಹಳ್ಳಿ ಹಾಗೂ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿದ್ದಾನೆ.

ಈತನ ಹೇಳಿಕೆ ಮೇರೆಗೆ 5.20 ಲಕ್ಷ ರೂ. ಮೌಲ್ಯದ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಕೆಂಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.