Home ಇದೀಗ ಬಂದ ಸುದ್ದಿ ಟ್ರಕ್‍ಗೆ ಬೆಂಕಿ, ನಾಲ್ವರ ಸಜೀವ ದಹನ

ಟ್ರಕ್‍ಗೆ ಬೆಂಕಿ, ನಾಲ್ವರ ಸಜೀವ ದಹನ

0
ಟ್ರಕ್‍ಗೆ ಬೆಂಕಿ, ನಾಲ್ವರ ಸಜೀವ ದಹನ

ಪೂನಾ,ಅ.17- ಮಹಾರಾಷ್ಟ್ರದ ಪುಣೆಯಲ್ಲಿ ತಡ ರಾತ್ರಿ ಟ್ಯಾಂಕರ್‌ಗೆ ಟ್ರಕ್‍ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಪುಣೆ-ಬೆಂಗಳೂರು ಹೆದ್ದಾರಿಯ ಸ್ವಾಮಿನಾರಾಯಣ ದೇವಸ್ಥಾನ ಮತ್ತು ನವ್ಲೆ ಸೇತುವೆಯ ಬಳಿ ರಾತ್ರಿ 09.30 ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಲ್ನೋಟಕ್ಕೆ ಬ್ರೇಕ್ ವೈಫಲ್ಯದಿಂದ ಟ್ರಕ್ ಕಂಟೇನರ್‌ಗೆ ಡಿಕ್ಕಿ ಹೊಡೆದು ನಂತರ ಮತ್ತೊಂದು ಟ್ರಕ್‍ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ಮೇರೆಗೆ ಪುಣೆ ಮಹಾನಗರ ಪಾಲಿಕೆಯ ಅಗ್ನಿಶಾಮಕ ದಳದ ಅ„ಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ.

ನಿಂತಿದ್ದ ಬೈಕ್‍ಗೆ ಟ್ಯಾಂಕರ್ ಡಿಕ್ಕಿ, ಅವಳಿ ಸಹೋದರಿಯರ ಸಾವು

ಸಂತ್ರಸ್ತರ ದೇಹಗಳನ್ನು ಉರಿಯುತ್ತಿರುವ ಟ್ರಕ್‍ನಿಂದ ಹೊರತೆಗೆಯಲಾಯಿತು ಮತ್ತು ಮುಂದಿನ ಪ್ರಕ್ರಿಯೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಘಟನೆ ನಡೆದಾಗ ಟ್ರಕ್‍ನಲ್ಲಿ ಆರು ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ, ಇನ್ನಿಬ್ಬರು ಟ್ರಕ್‍ನಿಂದ ಹಾರಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಅಪಘಾತದಲ್ಲಿ ಅವರಿಗೂ ಗಾಯಗಳಾಗಿವೆ ಎಂದು ಅವರು ಹೇಳಿದರು. ಆದರೆ ಬಲಿಪಶುಗಳನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ಅವರು ಹೇಳಿದರು. ಘಟನೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.