ಪಾಲ್ಘರ್,(ಮಹಾರಾಷ್ಟ್ರ)ಜ .31 -ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಇಂದು ಮುಂಜಾನೆ ಕಾರೊಂದು ಮುಂದೆ ಚಲಿಸುತ್ತಿದ್ದ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.
ಪಾಲ್ಘರ್ ಜಿಲ್ಲಾ ಕೇಂದ್ರದಿಂದ 100 ಕಿಮೀ ದೂರದ ಮಹಾಲಕ್ಷ್ಮಿ ಸೇತುವೆ ಬಳಿ ಮುಂಜಾನೆ 3.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಅವರೆಲ್ಲರು ಗುಜರಾತ್‍ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದರು ಎಂದು ಕಳಸ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅರೆ ಬೆತ್ತಲೆ ಮಹಿಳೆಯಿಂದ ವಿಮಾನ ಸಿಬ್ಬಂದಿಗೆ ಕಪಾಳಮೋಕ್ಷ
ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ , ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸಲಾತ್ತಿದೆ ಮೇಲ್ನೋಟಕ್ಕೆ ವೇಗವಾಗಿ ಚಲಿಸುತ್ತಿದ್ದ ಬಸ್ ಏಕಾಏಕಿ ನಿಧಾನಗೊಂಡಾಗ ಹಿಂದೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.
4 Dead, Car, Collides, Bus, Mumbai-Ahmedabad, Highway,