Thursday, February 29, 2024
Homeರಾಜ್ಯರಾಯಚೂರು : ಭೀಕರ ಅಪಘಾತದಲ್ಲಿ ನಾಲ್ವರ ದುರ್ಮರಣ

ರಾಯಚೂರು : ಭೀಕರ ಅಪಘಾತದಲ್ಲಿ ನಾಲ್ವರ ದುರ್ಮರಣ

ರಾಯಚೂರು,ಡಿ.5- ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಸಿಂದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ಇಸ್ಮಾಯಿಲ್(25), ಚನ್ನಬಸವ(26), ರವಿ(21) ಮತ್ತು ಅಂಬರೀಶ್(20) ಮೃತಪಟ್ಟ ದುರ್ದೈವಿಗಳು. ಕೊಲ್ಕತ್ತಾ ಮೂಲದ ಸಮೀರ್ ಎಂಬಾತ ಗಾಯಗೊಂಡಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಟಾಟಾಏಸ್ ವಾಹನದಲ್ಲಿ ಐದು ಮಂದಿ ಸಿಂಧನೂರಿನಿಂದ ಮಸ್ಕಿ ತಾಲೂಕಿನ ಮದ್ಲಾಪುರಕ್ಕೆ ಮದುವೆ ಸಮಾರಂಭದ ಡೆಕೋರೇಟ್‍ಗಾಗಿ ಸಾಮಾಗ್ರಿಗಳನ್ನು ತೆಗೆದುಕೊಂಡು ಇಂದು ಬೆಳಗಿನ ಜಾಗ 4.30ರ ಸುಮಾರಿನಲ್ಲಿ ಹೋಗುತ್ತಿದ್ದಾಗ ಪಗಡದಿನ್ನಿ ಕ್ಯಾಂಪ್ ಬಳಿ ಅತಿ ವೇಗವಾಗಿ ಬಂದ ಲಾರಿ ಟಾಟಾಏಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟಿದ್ದು ಸಮೀರ್ ಎಂಬಾತ ಗಾಯಗೊಂಡಿದ್ದಾರೆ.

ರಾಷ್ಟ್ರ ಉಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು : ಸುಪ್ರೀಂ ಕೋರ್ಟ್

ಸುದ್ದಿ ತಿಳಿಯುತ್ತಿದ್ದಂತೆ ಸಿಂದನೂರು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ವಾಹನದೊಳಗೆ ಸಿಲುಕಿ ಮೃತಪಟ್ಟಿದ್ದ ನಾಲ್ವರ ಮೃತದೇಹಗಳನ್ನು ಹೊರಗೆ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಸಿಂಧನೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಗೊಂಡ ಸಮೀರ್‍ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News