ಬಸ್ ಉರುಳಿಬಿದ್ದು ನಾಲ್ವರು ಪ್ರಯಾಣಿಕರ ಸಾವು

Social Share

ಪುಲ್ವಾಮಾ,ಮಾ.18-ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ನಾಲ್ವರು ಪ್ರಯಾಣಿಕರು ಮೃತಪಟ್ಟು, ಇತರ 28 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ದಕ್ಷಿಣ ಕಾಶ್ಮೀರ ಜಿಲ್ಲೆಯ ಬಸೂರ್ ಪ್ರದೇಶದ ಶ್ರೀಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಇಂದು ಬೆಳಿಗ್ಗೆ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದೇ ಮಳೆಗೆ ಮುಳುಗಿದ ದಶಪಥ ಹೆದ್ದಾರಿ, ಸರಣಿ ಅಪಘಾತ, ರೊಚ್ಚಿಗೆದ್ದ ಜನ

ಬಿಹಾರದ ನಿವಾಸಿಗಳಾದ ನಾಲ್ವರು ಪ್ರಯಾಣಿಕರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 28 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ 23 ಮಂದಿಯನ್ನು ಚಿಕಿತ್ಸೆಗಾಗಿ ಇಲ್ಲಿನ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

4 Killed, 28 Injured, ,Bus, Overturns, Kashmir, Pulwama,

Articles You Might Like

Share This Article