ಬೆಂಗಳೂರು, ಜ.22- ವಿವಿಧ ದೇಶಗಳಿಂದ ರಾಜಧಾನಿ ಬೆಂಗಳೂರಿಗೆ ಆಗಮಿಸಿದ ನಾಲ್ವರು ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿನ್ನೆ ರಾತ್ರಿ ಹಾಗೂ ಇಂದು ಬೆಳಗಿನ ಜಾವ ವಿವಿಧ ದೇಶಗಳಿಂದ ಆಗಮಿಸಿದ ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕೆಆರ್‍ಎಸ್‍ನಿಂದ ಆಗಮಿಸಿದ್ದ ಮೂವರು ಹಾಗೂ ಖತಾರ್‍ನಿಂದ ಆಗಮಿಸಿದ ಒಬ್ಬ ಪ್ರಯಾಣಿಕರಲ್ಲಿ ಕೋವಿಡ್ ದೃಢಪಟ್ಟಿದ್ದು, ಮಾರ್ಗಸೂಚಿ ಪ್ರಕಾರ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಪ್ರತಿನಿತ್ಯ ಆಗಮಿಸುವ ಪ್ರಯಾಣಿಕರನ್ನು ಪರೀಕ್ಷೆಗೊಳಪಡಿಸಿದಾಗ ನಿತ್ಯವೂ ಕೋವಿಡ್ ಸೋಂಕು ದೃಢಪಡುತ್ತಿದೆ.
ಒಂದೆಡೆ ರಾಜಧಾನಿಯಲ್ಲಿ ಅಡೆತಡೆ ಇಲ್ಲದೆ ನಿರಂತರವಾಗಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಹೀಗಾಗಿ ಸಾರ್ವಜನಿಕವಾಗಿ ಆತಂಕ ಅಕವಾದಂತಾಗಿದೆ.
