ಶಿಕ್ಷಕಿಗೆ ಕಿರುಕುಳ ನೀಡಿದ 4 ವಿದ್ಯಾರ್ಥಿಗಳ ಬಂಧನ

Social Share

ಮೀರತ್ (ಯುಪಿ), ನ.28 -ಶಾಲೆಯೊಂದರಲ್ಲಿ ಮಹಿಳಾ ಶಿಕ್ಷಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಅಶ್ಲೀಲ ಪದಗಳಿಂದ ಶಿಕ್ಷಕಿಯನ್ನು ನಿಂದಿಸಿದ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‍ಆಗಿದ್ದು ತುರ್ತು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಿಥೌರ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಧನಾ ಇನಾಯತ್‍ಪುರ ಗ್ರಾಮದ ಶಾಲೆಯಲೀ ಘಟನೆ ನಡೆದಿದೆ. ಲಿಖಿತ ದೂರಿನಲ್ಲಿ, ಶಿಕ್ಷಕಿಯು ಶಾಲೆ 12 ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಶಿಕ್ಷಕಿಯ ವಿರುದ್ಧ ವಿದ್ಯಾರ್ಥಿಗಳು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಹಲವಾರು ಸಂದರ್ಭಗಳಲ್ಲಿ ಅವರಿಗೆ ಬುದ್ದಿ ಹೇಳಿದರು ಯಾವುದೇ ಪ್ರಯೋಜನವಾಗಲಿಲ್ಲ ಎಂದು ಕಿಥೌರ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಅರವಿಂದ್ ಮೋಹನ್ ಶರ್ಮಾ ಹೇಳಿದರು.

ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ನನಗೆ ಐ ಲವ್ ಯೂ ಎಂದು ಹೇಳಿದ ಅದರ ಮೊಬೈಲ್ ಮೂಲಕ ವೀಡಿಯೊ ರೆಕಾರ್ಡ್ ಮಾಡಿದರು, ಇದಲ್ಲದೇ ತರಗತಿಯೊಳಗೆ ನನ್ನ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದರು ಎಂದು ಶಿಕ್ಷಕರು ದೂರಿನಲ್ಲಿ ತಿಳಿಸಿದ್ದಾರೆ.

ಪದೇ ಪದೇ ಸ್ಯಾಟಲೈಟ್ ಕರೆ : ಕರಾವಳಿ ಜನರಲ್ಲಿ ಆತಂಕ

ಸುಮಾರು 16 ವರ್ಷ ವಯಸ್ಸಿನ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಈವರೆಗೆ ನಾಲ್ವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಬಾಲಾಪರಾಧ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ ಎಂದು ಮೀರತ್ ಪೊಲೀಸರು ಟ್ವೀಟ್ ಮಾಡಿದ್ದಾರೆ.

#4students, #held, #harassing, #teacher, #UP, #school,

Articles You Might Like

Share This Article