ಜಲಕ್ಷಾಮದ ನಡುವೆಯೂ ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ಧ ರೈತರ ಆಕ್ರೋಶ

ಮಂಡ್ಯ,ಮಾ.10- ಜಲಕ್ಷಾಮದ ನಡುವೆ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಕಪ್ಪು ಬಾವುಟ ಪ್ರದರ್ಶಿಸಿದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರು ಹಾಗೂ ರೈತರನ್ನು ಪೊಲೀಸರು ವಶಕ್ಕೆ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮಂಡ್ಯ ನಗರದಲ್ಲಿಂದು ಹಮ್ಮಿಕೊಂಡಿದ್ದ ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲೇ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರು ಕಪ್ಪು ಪಟ್ಟಿ ಕಟ್ಟಿಕೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೆ ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ತಡೆ ಯತ್ನ ಮಾಡಿದರು. ಕೆಆರ್‍ಎಸ್ ಅಣೆಕಟ್ಟಿನಲ್ಲಿ ನೀರು ಸಂಗ್ರಹ … Continue reading ಜಲಕ್ಷಾಮದ ನಡುವೆಯೂ ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ಧ ರೈತರ ಆಕ್ರೋಶ