ಸರಣಿ ಅಪಘಾತ: 38 ಮಂದಿಗೆ ಗಾಯ, 40 ವಾಹನಗಳು ಜಖಂ

Social Share

ಪುಣೆ,ನ.21- ಸರಣಿ ಅಪಘಾತ ಸಂಭವಿಸಿ ಸುಮಾರು 48 ವಾಹನಗಳು ಜಖಂಗೊಂಡು 30 ಮಂದಿ ಗಾಯಗೊಂಡಿರುವ ಘಟನೆ ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನವಿಲೆ ಸೇತುವೆ ಬಳಿ ಸಂಭವಿಸಿದೆ.

ನಿನ್ನೆ ರಾತ್ರಿ ಪುಣೆ ಮಾರ್ಗವಾಗಿ ತೆರಳುತ್ತಿದ್ದ ಟ್ರಕ್‍ವೊಂದು ಬ್ರೇಕ್ ವೈಫಲ್ಯದಿಂದ ಈ ಸರಣಿ ಅಪಘಾತ ಸಂಭವಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೊ ಪಾಲಿಟಿನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಕ್ಷಣಾ ತಂಡ ತೆರಳಿ ಕಾರ್ಯಾಚರಣೆ ನಡೆಸಿ ವಾಹನಗಳನ್ನು ತೆರವುಗೊಳಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದಿಂದ ಮುಂಬೈಗೆ ಹೋಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿ 2 ಕಿ.ಮೀಗೂ ಹೆಚ್ಚು ಟ್ರಾಫಿಕ್‍ಜಾಮ್ ಹೆಚ್ಚಾಗಿ ವಾಹನ ಸವಾರರು ಹೈರಾಣಾಗಿದ್ದಾರೆ.

ಖಾಸಗಿ ಪುಠಗಳನ್ನ ನೋಡಿ ಕೊಂಡಾಡಿದ ಪ್ರೇಕ್ಷಕ

ಉಪಪೊಲೀಸ್ ಆಯುಕ್ತ ಸುಹೇಲ್ ಶರ್ಮ ಘಟನೆ ಬಗ್ಗೆ ಮಾಹಿತಿ ನೀಡಿ ಟ್ರಕ್ ಬ್ರೇಕ್ ವೈಫಲ್ಯದಿಂದಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೂ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿ 48ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆ.

5 ವರ್ಷಗಳ ನಂತರ ಚೇತೇಶ್ವರ್ ಪೂಜಾರಗೆ ಅರ್ಜುನ ಪ್ರಶಸ್ತಿ ಪ್ರದಾನ

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

40 vehicles, wrecked, several, injured, Pune, Bengaluru, highway,

Articles You Might Like

Share This Article