ನವದೆಹಲಿ,ಫೆ.1- ಸಂಪರ್ಕ ಮತ್ತು ಪ್ರಯಾಣಿಕರ ಸೌಕರ್ಯವನ್ನು ಹೆಚ್ಚಿಸುವಲ್ಲಿ ಗಮನ ಹರಿಸಿದ್ದೇವೆ ಎಂದಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 40,000 ಸಾಮಾನ್ಯ ರೈಲು ಬೋಗಿಗಳನ್ನು ವಂದೇ ಭಾರತ್ ಮಾನದಂಡಕ್ಕೆ ಪರಿವರ್ತಿಸಲಾಗುವುದು ಎಂದು ತಿಳಿಸಿದ್ದಾರೆ.
ತಮ್ಮ ಮಧ್ಯಂತರ ಬಜೆಟ್‍ನಲ್ಲಿ ಅವರು, ಪ್ರಯಾಣಿಕರ ಸುರಕ್ಷತೆ, ಅನುಕೂಲತೆ ಮತ್ತು ಸೌಕರ್ಯ ವನ್ನು ಹೆಚ್ಚಿಸಲು ಇದನ್ನು ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇಂಧನ ಖನಿಜ ಮತ್ತು ಸಿಮೆಂಟ್ ಕಾರಿಡಾರ್, ಬಂದರು ಸಂಪರ್ಕ ಕಾರಿಡಾರ್ ಮತ್ತು ಹೆಚ್ಚಿನ ಸಂಚಾರ ಸಾಂದ್ರತೆ ಕಾರಿಡಾರ್ – ಮೂರು ಪ್ರಮುಖ ರೈಲ್ವೆ ಕಾರಿಡಾರ್ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
25 ಕೋಟಿಗೂ ಹೆಚ್ಚು ಜನ ಬಡತನದಿಂದ ಹೊರಬಂದಿದ್ದಾರೆ : ನಿರ್ಮಲಾ
ಪಿಎಂ ಗತಿಶಕ್ತಿ ಅಡಿಯಲ್ಲಿ ಗುರುತಿಸಲ್ಪಟ್ಟಿರುವ ಈ ಯೋಜನೆಗಳು ಬಹು-ಮಾದರಿ ಸಂಪರ್ಕವನ್ನು ಸಕ್ರಿಯಗೊಳಿಸುತ್ತದೆ, ಲಾಜಿಸ್ಟಿಕ್ಸ್ ದಕ್ಷತೆಯನ್ನು ಸುಧಾರಿಸುತ್ತದೆ ಮತ್ತು ವೆಚ್ಚವನ್ನು ಕಡಿಮೆ ಮಾಡುತ್ತದೆ ಎಂದು ವಿವರಿಸಿದ್ದಾರೆ.