Thursday, September 19, 2024
Homeರಾಜ್ಯ31 ಲಕ್ಷ ಮೌಲ್ಯದ 45 ದ್ವಿಚಕ್ರ ವಾಹನಗಳ ವಶ

31 ಲಕ್ಷ ಮೌಲ್ಯದ 45 ದ್ವಿಚಕ್ರ ವಾಹನಗಳ ವಶ

ಬೆಂಗಳೂರು,ಆ.20- ನಗರದ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿ 31 ಲಕ್ಷ ಮೌಲ್ಯದ 45 ದ್ವಿಚಕ್ರ ವಾಹನಗಳು, ಮೊಬೈಲ್, ಲ್ಯಾಪ್‍ಟಾಪ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಪೀಣ್ಯ: ನಾಗಸಂದ್ರ ಮೆಟ್ರೊ ನಿಲ್ದಾಣದ ಹತ್ತಿರ ದ್ವಿಚಕ್ರ ವಾಹನ ನಿಲ್ಲಿಸಿ ಕೆಲಸಕ್ಕೆ ಹೋಗಿ ಸಂಜೆ ವಾಪಸ್ ಬಂದು ನೋಡಿದಾಗ ವಾಹನ ಕಳವಾಗಿರುವ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಿನಾಯಕನ ಗರದಲ್ಲಿ ಆರೋಪಿಯೊಬ್ಬನನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಈ ಪ್ರಕರಣವಲ್ಲದೆ 20 ದ್ವಿಚಕ್ರ ವಾಹನ ಕಳವು ಮಾಡಿದ್ದಾಗಿ ತಿಳಿಸಿದ್ದಾನೆ.
ಈ ಪೈಕಿ 7 ದ್ವಿಚಕ್ರ ವಾಹನಗಳನ್ನು ಚಿತ್ರದುರ್ಗದಲ್ಲಿ ಹಾಗೂ ಉಳಿದ ಏಳು ದ್ವಿಚಕ್ರ ವಾಹನಗಳನ್ನು ಇಬ್ಬರು ಸ್ನೇಹಿತರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ ಮೇರೆಗೆ ಅವುಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಯ ಬಂಧನದಿಂದ ಒಟ್ಟು 15 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿದ್ದು, ಉಳಿದ ಐದು ವಾಹನಗಳ ವಾರಸುದಾರರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ. ಇನ್‍ಸ್ಪೆಕ್ಟರ್ ಅನಿಲ್‍ಕುಮಾರ್ ಹಾಗೂ ಸಿಬ್ಬಂದಿ ತಂಡ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದೆ.

ವಿದ್ಯಾರಣ್ಯಾಪುರ: ರಾತ್ರಿ ವೇಳೆ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಎಂಜಿನ್ ಹಾಗೂ ಚಾರ್ಸಿ ನಂಬರ್‍ಗಳನ್ನು ಟ್ಯಾಂಪರಿಂಗ್ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಓಎಲ್‍ಎಕ್ಸ್‍ನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂ„ಸಿರುವ ವಿದ್ಯಾರಣ್ಯಾಪುರ ಠಾಣೆ ಪೊಲೀಸರು 26 ಲಕ್ಷ ಮೌಲ್ಯದ 25 ದ್ವಿಚಕ್ರ ವಾಹನಗಳು, 6 ಮೊಬೈಲ್, 2 ಲ್ಯಾಪ್‍ಟಾಪ್ ಹಾಗೂ ಕಲರ್ ಪ್ರಿಂಟ್ ವಶಪಡಿಸಿಕೊಂಡಿದ್ದಾರೆ.
ಈ ವ್ಯಾಪ್ತಿಯಲ್ಲಿ ಹೆಚ್ಚಾಗಿ ದ್ವಿಚಕ್ರ ವಾಹನಗಳು ಕಳವಾಗುತ್ತಿದ್ದ ಬಗ್ಗೆ ದೂರು ದಾಖಲಾದ ಹಿನ್ನಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಇನ್‍ಸ್ಪೆಕ್ಟರ್ ಶಿವಸ್ವಾಮಿ ಅವರನ್ನೊಳಗೊಂಡ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು.

ಈ ತಂಡವು ಹಲವಾರು ಆಯಾಮಗಳಲ್ಲಿ ಕಾರ್ಯಾಚರಣೆ ಕೈಗೊಂಡು ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಂಧ್ರಪ್ರದೇಶದ ಕಡಪ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿಕೊಂಡು ತಾವು ವಾಸವಿರುವ ಹುಣಸಮಾರನಹಳ್ಳಿಯ ಮನೆಗೆ ತಂದು ಅವುಗಳ ಎಂಜಿನ್ ಚಾರ್ಸಿ ನಂಬರ್‍ಗಳನ್ನು ಟ್ಯಾಂಪರ್ ಮಾಡಿ ನಂತರ ನಕಲಿ ದಾಖಲೆಗಳನ್ನು ಸೃಷ್ಟಿಸಿ ಓಎಲ್‍ಎಕ್ಸ್‍ನಲ್ಲಿ ಮಾರಾಟ ಮಾಡುತ್ತಿದುದ್ದಾಗಿ ತಿಳಿಸಿದ್ದಾರೆ.

ಆರೋಪಿಗಳು ಕಳ್ಳತನ ಮಾಡಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ 17 ದ್ವಿಚಕ್ರ ವಾಹನಗಳು ಹಾಗೂ ಮನೆ ಬಳಿ ಇದ್ದ ನಾಲ್ಕು ದ್ವಿಚಕ್ರ ವಾಹನ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES

Latest News