Sunday, May 19, 2024
Homeಇದೀಗ ಬಂದ ಸುದ್ದಿಚುನಾವಣಾ ಅಕ್ರಮ : ರಾಜ್ಯದಲ್ಲಿ ಈವರೆಗೆ 452.72 ಕೋಟಿ ಮೊತ್ತದ ನಗದ, ಮದ್ಯ ಜಪ್ತಿ

ಚುನಾವಣಾ ಅಕ್ರಮ : ರಾಜ್ಯದಲ್ಲಿ ಈವರೆಗೆ 452.72 ಕೋಟಿ ಮೊತ್ತದ ನಗದ, ಮದ್ಯ ಜಪ್ತಿ

ಬೆಂಗಳೂರು,ಮೇ 6- ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೂ 452.72 ಕೋಟಿ ರೂ. ಮೊತ್ತದ ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ವಜ್ರ, ಉಚಿತ ಉಡುಗೊರೆ ಹಾಗೂ ನಗದನ್ನು ಜಪ್ತಿ ಮಾಡಲಾಗಿದೆ.

ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಬಂದಾಗಿನಿಂದ ಪ್ರತಿನಿತ್ಯ ಒಂದಲ್ಲಾ ಒಂದು ಕಡೆ ಈ ರೀತಿ ಜಪ್ತಿಯಾಗುತ್ತಲೇ ಇದೆ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಹಣ, ಚಿನ್ನ ಹಾಗೂ ಇತರ ವಸ್ತುಗಳು ಜಪ್ತಿಯಾಗಿವೆ.

ಉತ್ತರಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆದಾಯ ತೆರಿಗೆ ಇಲಾಖೆಯವರು 47,47,000 ರೂಪಾಯಿ ವೌಲ್ಯದ 750 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್‌ ಕ್ಷಿಪ್ರಪಡೆಗಳು, ಸ್ಥರ ಕಣ್ಗಾವಲು ತಂಡಗಳು 143.16 ಕೋಟಿ ರೂ. ಮೊತ್ತದ ಮದ್ಯ, ಡ್ರಗ್‌್ಸ, ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ನಗದನ್ನು ಜಪ್ತಿ ಮಾಡಿದ್ದಾರೆ.

ಅಬಕಾರಿ ಇಲಾಖೆಯವರು 178.48 ಕೋಟಿ ರೂ. ಮೊತ್ತದ ಮದ್ಯ ಹಾಗೂ ಡ್ರಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದರೆ, ಆದಾಯ ತೆರಿಗೆ ಅಧಿ ಕಾರಿಗಳು 49.97 ಕೋಟಿ ರೂ. ಮೊತ್ತದ ನಗದು, ಚಿನ್ನ, ವಜ್ರಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆಯವರು 80.91 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ 2,301 ಎಫ್‌ಐಆರ್‌ ಅನ್ನು ದಾಖಲಿಸಲಾಗಿದ್ದು, 2,071 ವಿವಿಧ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

RELATED ARTICLES

Latest News