Wednesday, July 9, 2025
Homeರಾಜ್ಯSHOCKING : 4ನೇ ತರಗತಿ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಸಾವು

SHOCKING : 4ನೇ ತರಗತಿ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಸಾವು

4th grade student dies of heart attack while listening to lessons

ಗುಂಡ್ಲುಪೇಟೆ,ಜು.9-ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮನೋಜ್ ಕುಮಾರ್ (10) ಮೃತ ದುರ್ದೈವಿ.ತಾಲೂಕಿನ ಕುರಬರಗೇರಿಯಲ್ಲಿ ಈ ಘಟನೆ ನಡೆದಿದೆ.

ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ. ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ ಇದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆದಿದ್ದ ಎಂದುತಿಳಿದುಬಂದಿದೆ.

ಘಟನೆ ಬಗ್ಗೆ ಪೊಲೀಸರು ಪರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದೆ. ಹೃದಯಾಘಾತದಿಂದ ಚಾಲಕ ಸಾವುಹೃದಯಾಘಾತದಿಂದ ಗೂಡ್ಸ್ ವಾಹನ ಚಾಲಕ ಮೃತಪಟ್ಟಿರುವ ಘಟನೆ ಸವದತ್ತಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದಿದೆ. ಅಶೋಕ್ ಜೀರಿಗವಾಡ (40) ಮೃತ ದುರ್ದೈವಿ.

ಸವದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿಯಾಗಿರುವ ಮೃತ ಅಶೋಕ್ ಸವದತ್ತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಗೆ ಗೂಡ್ಸ್ ವಾಹನದಲ್ಲಿ ಹೆಸರುಕಾಳು ತಂದಿದ್ದರು. ಈ ವೇಳೆ ಅಶೋಕ್ ಎದೆನೋವಿನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸವದತ್ತಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

Latest News