Friday, November 22, 2024
Homeರಾಜ್ಯಬೆಂಗಳೂರಿನ ಬನಶಂಕರಿ ಬಳಿ ಒತ್ತವರಿಯಾಗಿದ್ದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ : ಖಂಡ್ರೆ

ಬೆಂಗಳೂರಿನ ಬನಶಂಕರಿ ಬಳಿ ಒತ್ತವರಿಯಾಗಿದ್ದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ : ಖಂಡ್ರೆ

ಬೆಂಗಳೂರು, ಮೇ 23- ಬೆಂಗಳೂರು ಬನಶಂಕರಿ ಬಳಿಯ ಬಿ.ಎಂ.ಕಾವಲ್‌ ಸರ್ವೆ ನಂ. 92ರಲ್ಲಿ ಒತ್ತವರಿ ಮಾಡಲಾಗಿದ್ದ ಸುಮಾರು 60 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ವಿಕಾಸಸೌಧದಲ್ಲಿಂದು ತಮನ್ನು ಭೇಟಿ ಮಾಡಿದ್ದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಾರ ಅರಣ್ಯ ಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈಗಾಗಲೇ ಆದೇಶ ಆಗಿರುವ ಪ್ರಕರಣಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸುವಂತೆ ನೀಡಿದ್ದ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಕಾರ್ಯಪ್ರವೃತ್ತರಾದ ಬೆಂಗಳೂರು ಅರಣ್ಯಾಧಿಕಾರಿಗಳು 5.2 ಎಕರೆ ಒತ್ತುವರಿ ತೆರವು ಮಾಡಿಸಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.

ಬಿ.ಎಂ. ಕಾವಲ್‌ ವ್ಯಾಪ್ತಿಯ ಗೊಟ್ಟೆಗೆರೆಪಾಳ್ಯದ ವೆಂಕಟಪ್ಪ ಮತ್ತು ಅವರ ತಾಯಿ ತಿಮಕ್ಕ ಎಂಬುವವರು 5 ಎಕರೆ 20 ಗುಂಟೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದರು. ಎ.ಸಿ.ಎಫ್‌. ನ್ಯಾಯಾಲಯದ ಆದೇಶದ ಮೇರೆಗೆ ಈ ಭೂಮಿ ತೆರವು ಮಾಡಲಾಗಿದೆ. ಈ ಸಂಬಂಧ ಜೆ.ಎಂ.ಎಫ್‌.ಸಿ. ನ್ಯಾಯಾಲಯದಲ್ಲಿ ಪ್ರತಿವಾದಿಗಳು ಹಾಕಿದ್ದ ದಾವೆ ವಜಾ ಆಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದರು.

20 ಸ್ಥಾನಗಳಲ್ಲಿ ಗೆಲುವು :
ಈ ಬಾರಿ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಎಲ್ಲಿಯೂ ಮೋದಿ ಅಲೆ ಕಾಣಲೇ ಇಲ್ಲ. ಗ್ಯಾರಂಟಿ ಅಲೆ ಎಲ್ಲೆಡೆ ಪಸರಿಸಿದ್ದು, ಕಾಂಗ್ರೆಸ್‌‍ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ. ಗ್ಯಾರಂಟಿ ಯೋಜನೆಗಳು ಫಲ ನೀಡಿವೆ ಎಂದರು.ನಮ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಈ ಅವಧಿಯಲ್ಲಿ ಪಾರದರ್ಶಕ ಮತ್ತು ಜನಪರವಾದ ಆಡಳಿತವನ್ನು ನೀಡಿದ್ದು, ಜನರ ವಿಶ್ವಾಸ ಇಮಡಿಯಾಗಿದೆ. ಇದು ಚುನಾವಣೆಯ ಲಿತಾಂಶದಲ್ಲೂ ಪ್ರತಿಲಿಸಲಿದೆ ಎಂದು ಹೇಳಿದರು.

ಪ್ರತಿಪಕ್ಷಗಳಿಂದ ದಿಕ್ಕು ತಪ್ಪಿಸುವ ಪ್ರಯತ್ನ:
ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಅತ್ಯಂತ ಹೇಯವಾದುದಾಗಿದ್ದು, ದೇಶದಾದ್ಯಂತ ಚರ್ಚೆಯ ವಸ್ತುವಾಗಿದೆ. ಈ ಪ್ರಕರಣದ ತನಿಖೆಯನ್ನು ಎಸ್‌‍.ಐ.ಟಿ. ಗೆ ವಹಿಸಲಾಗಿದ್ದು, ಪ್ರಾಮಾಣಿಕವಾಗಿ ಅಧಿಕಾರಿಗಳು ತಮ ಕಾರ್ಯ ಮಾಡುತ್ತಿದ್ದಾರೆ. ಈ ಹಂತದಲ್ಲಿ ಅನುಮಾನ ವ್ಯಕ್ತಪಡಿಸುವುದು, ಅನಗತ್ಯ ಆರೋಪ ಮಾಡುವುದು ಸರಿಯಲ್ಲ ಎಂದರು.

ಕೇಂದ್ರ ಪ್ರಜ್ವಲ್‌ ಬಂಧನಕ್ಕೆ ಸಹಕರಿಸಬೇಕು:
ಪ್ರಜ್ವಲ್‌ ರೇವಣ್ಣಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್‌‍ ಪೋರ್ಟ್‌ ರದ್ದು ಮಾಡುವಂತೆ ಕೋರಿ ರಾಜ್ಯದಿಂದ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಇಂಟರ್‌ ಪೋಲ್‌ ನೆರವಿನಿಂದ ಆರೋಪಿಯ ಬಂಧನಕ್ಕೆ ಸಹಕಾರ ನೀಡಬೇಕು ಎಂದು ಈಶ್ವರ ಖಂಡ್ರೆ ಒತ್ತಾಯಿಸಿದರು.

RELATED ARTICLES

Latest News