ಕಾರು-ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ, ಐವರ ಸಾವು

Social Share

ಆಲಪ್ಪುಳ (ಕೇರಳ), ಜ. 23-ಕಾರು ಮತ್ತು ಟ್ರಕ್ ನಡುವೆ ಮುಂಜಾನೆ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಆಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ.

ಮುಂಜಾನೆ 1.30 ರ ಸುಮಾರಿಗೆ ಅಂಬಲಪುಳದ ಬಳಿ ಈ ದುರ್ಘಟನೆ ಸಂಭವಿಸಿದ್ದು ಐವರು ಪ್ರಯಾಣಿಸುತ್ತಿದ್ದ ಕಾರು ವೇಗವಾಗಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟಿರುವ ಐವರೂ ತಿರುವನಂತಪುರಂನಲ್ಲಿರುವ ಇಸ್ರೋ ಕ್ಯಾಂಟೀನ್‍ನಲ್ಲಿ ಗುತ್ತಿಗೆ ನೌಕರರಾಗಿದ್ದು, ಮದುವೆಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.ಅಮಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಅಲಪ್ಪುಳ ವೈದ್ಯಕೀಯ ಕಾಲೇಜಿಗೆ ರವಾನಿಸಿದ್ದು ,ಲಾರಿ ಚಾಲಕ ಮತ್ತು ಕ್ಲೀನರ್ ಬಂಧಿಸಿದ್ದಾರೆ.

ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ಮಾಡಿದ ಡೆಲಿವರಿ ಬಾಯ್ ಸೇರಿ ಐವರು ಸೆರೆ

ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮರಣೋತ್ತರ ಪರೀಕ್ಷೆಯ ನಂತರ ಸಂಬಂಧಿಕರಿಗೆ ಶವ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

5 Dead, Car, Collides, Lorry, Kerala, Alappuzha,

Articles You Might Like

Share This Article