ನಿಯಂತ್ರಣ ತಪ್ಪಿ ಟ್ರಕ್‍ಗೆ ಅಪ್ಪಳಿಸಿದ ಕಾರು, 5 ಸಾವು

Social Share

ಮುಂಬೈ,ನ.18- ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಟ್ರಕ್‍ಗೆ ಅಪ್ಪಳಿಸಿದ ಪರಿಣಾಮ ಐದು ಮಂದಿ ಮೃತಪಟ್ಟು, ಇತರ ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮುಂಬೈ-ಪುಣೆ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.

ಪುಣೆಯಿಂದ ಮುಂಬೈಗೆ ತೆರಳುತ್ತಿದ್ದ ಮಾರುತಿ ಸುಜುಕಿ ಎರ್ಟಿಗಾ ಕಾರು ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖೋಪೋಲಿ ಬಳಿ 11:30ರ ಸುಮಾರಿಗೆ ಹಿಂದಿನಿಂದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರು ಪುಣೆಯಿಂದ ಮುಂಬೈಗೆ ಹೋಗುತ್ತಿದ್ದಾಗ ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಹಿಂದಿನಿಂದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಂಬತ್ತು ಮಂದಿ ಇದ್ದರು. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದರು. ಖೋಪೋಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಲಿಯಾದವರೆಲ್ಲರೂ ಪುರುಷರಾಗಿದ್ದರೆ, ಗಾಯಗೊಂಡ ನಾಲ್ವರಲ್ಲಿ ಒಬ್ಬರು ಮಹಿಳೆಯಾಗಿದ್ದಾರೆ ಎಂದು ಅವರು ಹೇಳಿದರು.

ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ ದೇವೇಗೌಡರು-ಮಾಧುಸ್ವಾಮಿ ಭೇಟಿ

ಚಾಲಕನ ನಿಯಂತ್ರಣ ತಪ್ಪಿದ ಕಾರು ಟ್ರಕ್‍ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಚಾಲಕನ ವಿರುದ್ಧ ಅಪರಾಧವನ್ನು ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತರ ಎತ್ತಂಗಡಿ..?

Articles You Might Like

Share This Article