Saturday, June 22, 2024
Homeರಾಜ್ಯ"ಮುನಿಯಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಿದರೆ 5 ಶಾಸಕರು ರಾಜೀನಾಮೆ ನೀಡ್ತೀವಿ"

“ಮುನಿಯಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಿದರೆ 5 ಶಾಸಕರು ರಾಜೀನಾಮೆ ನೀಡ್ತೀವಿ”

ಬೆಂಗಳೂರು, ಮಾ.27- ಸಚಿವ ಕೆ.ಹೆಚ್.ಮುನಿಯಪ್ಪ ಅವರ ಕುಟುಂಬಕ್ಕೆ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದರೆ, ಒಬ್ಬ ಸಚಿವರು ಸೇರಿದಂತೆ ಐವರು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೊತ್ತನೂರು ಮಂಜುನಾಥ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಹೆಚ್.ಮುನಿಯಪ್ಪ ಕುಟುಂಬ ಟಿಕೆಟ್ ನೀಡದಂತೆ ಮನವಿ ಮಾಡಿದ್ದೇವೆ. ಒಂದು ವೇಳೆ ಟಿಕೆಟ್ ನೀಡಿದರೇ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವಿಧಾನ ಪರಿಷತ್‍ನ ಕಾಂಗ್ರೆಸ್ ಸದಸ್ಯರಾದ ಅನಿಲ್ ಕುಮಾರ್, ನಜೀರ್ ಅಹ್ಮದ್ ರಾಜೀನಾಮೆ ನೀಡುತ್ತೇವೆ ಎಂದಿದ್ದಾರೆ.

ಸಭಾಪತಿ ಬಸವರಾಜ ಹೊರಟ್ಟಿ ಅವರ ಭೇಟಿಗೆ 12 ಗಂಟೆಗೆ ಸಮಯ ಕೇಳಿದ್ದೇವೆ. ವಿಧಾನ ಪರಿಷತ್ ಸದಸ್ಯರು ರಾಜಿನಾಮೆ ನೀಡಲಿದ್ದಾರೆ. ಶಾಸಕರು ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಪ್ರಯಾಣ ಮಾಡುತ್ತೇವೆ. ಸಂಜೆ ನಾಲ್ಕು ಗಂಟೆಗೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ರನ್ನು ಭೇಟಿ ಮಾಡಿ ರಾಜೀನಾಮೆ ನೀಡಲಿದ್ದೇವೆ ಎಂದಿದ್ದಾರೆ.

ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇವೆ. ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಪಕ್ಷ ಗೆಲ್ಲಿಸುವ ಜವಾಬ್ದಾರಿ ನಮ್ಮದು ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧವಾಗಿದ್ದೇವೆ. ರಮೇಶ್ ಕುಮಾರ್ ಸೇರಿ ನಾವೆಲ್ಲಾ ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದಿದ್ದಾರೆ.

RELATED ARTICLES

Latest News