Wednesday, January 15, 2025
Homeರಾಷ್ಟ್ರೀಯ | Nationalಸೇನಾ ಕಾರ್ಯಾಚರಣೆ : ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಐವರು ಉಗ್ರರ ಹತ್ಯೆ

ಸೇನಾ ಕಾರ್ಯಾಚರಣೆ : ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಐವರು ಉಗ್ರರ ಹತ್ಯೆ

5 Terrorists Killed In Encounter With Security Forces In J&K's Kulgam

ಶ್ರೀನಗರ,ಡಿ.19- ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಇಲ್ಲಿ ತಿಳಿಸಿದ್ದಾರೆ.

ಕಳೆದ ರಾತ್ರಿ ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಶಂಕಿತ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕದ್ದರ್ನಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದರು ಮುಂಜಾನೆ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಚ್ಚೆದ್ದ ಪಡೆ ಪ್ರತಿದಾಳಿ ವೇಳೆ ಸುತ್ತುವರೆದು ನಡೆಸಿದ ಎನ್ಕೌಂಟರ್ನಲ್ಲಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

ಐವರು ಭಯೋತ್ಪಾದಕರ ಮೃತದೇಹಗಳು ತೋಟದಲ್ಲಿ ಬಿದ್ದಿವೆ,ಇನ್ನು ಹಲವರು ಪರಾರಿಯಾಗಿರಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.

RELATED ARTICLES

Latest News