Sunday, September 8, 2024
Homeರಾಷ್ಟ್ರೀಯ | Nationalಐದು ವರ್ಷದ ಬಾಲಕಿ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ

ಐದು ವರ್ಷದ ಬಾಲಕಿ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ

ಅಗರ್‌ ಮಾಲ್ವಾ, ಮೇ 14 (ಪಿಟಿಐ) ಮಧ್ಯಪ್ರದೇಶದ ಅಗರ್‌ ಮಾಲ್ವಾ ಜಿಲ್ಲೆಯಲ್ಲಿ 17 ವರ್ಷದ ಹುಡುಗನೊಬ್ಬ ತನ್ನ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಯತ್‌ ಕಾಲಾ ಪೊಲೀಸ್‌‍ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಬಾಲಕ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಸೋಯತ್‌ ಕಾಲಾ ಪೊಲೀಸ್‌‍ ಠಾಣೆಯ ಉಸ್ತುವಾರಿ ಯಶವಂತ್‌ ರಾವ್‌ ಗಾಯಕ್ವಾಡ್‌ ತಿಳಿಸಿದ್ದಾರೆ.

ನಂತರ ರಾತ್ರಿ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡ ನಂತರ ಬಾಲಕಿ ತನ್ನ ಕುಟುಂಬ ಸದಸ್ಯರಿಗೆ ಘಟನೆಯ ಬಗ್ಗೆ ತಿಳಿಸಿದ್ದು ನಂತರ ಪೊಲೀಸ್‌‍ ದೂರು ದಾಖಲಿಸಿದ್ದಾರೆ ಎಂದು ಅವರು ಹೇಳಿದರು. ಘಟನೆಯ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆಯು ಅಪರಾಧವನ್ನು ದಢಪಡಿಸಿದೆ ಎಂದು ಅವರು ಹೇಳಿದರು.

ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಅಪ್ರಾಪ್ತ ಬಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

RELATED ARTICLES

Latest News