500ಕೆಜಿ ನಿಷೇಧಿತ ಪ್ಲಾಸ್ಟಿಕ್ ಸೀಜ್, 34 ಸಾವಿರ ರೂ.ದಂಡ

Social Share

ಬೆಂಗಳೂರು,ಡಿ.3- ರಾಜರಾಜೇಶ್ವರಿ ನಗರ ವಲಯದ ಯಶವಂತಪುರ ಹಾಗೂ ಪೀಣ್ಯ ಇಂಡಸ್ಟ್ರಿಯಲ್ ಪ್ರದೇಶಗಳಲ್ಲಿ ದಾಳಿ ನಡೆಸಿರುವ ಬಿಬಿಎಂಪಿ ಅಧಿಕಾರಿಗಳು 500 ಕೆ.ಜಿ ನಿಷೇದಿತ ಪ್ಲಾಸ್ಟಿಕ್ ವಶಪಡಿಸಿಕೊಂಡು 34 ಸಾವಿರ ದಂಡ ವಿಧಿಸಿದ್ದಾರೆ.

ರಾಜರಾಜೇಶ್ವರಿ ನಗರ ವಲಯದ ಹೆಚ್‍ಎಂಟಿ ವಾರ್ಡ್ ವ್ಯಾಪ್ತಿಯಲ್ಲಿನ ಯಶವಂತಪುರ ಇಂಡಸ್ಟ್ರಿಯಲ್ ಪ್ರದೇಶದ 5ನೇ ಮುಖ್ಯರಸ್ತೆಯಲ್ಲಿ ಬರುವ ಮಹಾವೀರ್ ಪಾಲಿ ಪ್ಯಾಕ್ ವೈಭವ ಪ್ರಿಂಟ್ ಪ್ಯಾಕ್ ಪ್ಲಾಸ್ಟಿಕ್ ತಯಾರಿಕಾ ಘಟಕಕ್ಕೆ ಘನತ್ಯಾಜ್ಯ ನಿರ್ವಹಣೆ ವಿಭಾಗದ ಕಿರಿಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್ ಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ನಿಗತ 50 ಮೈಕ್ರಾನ್ ಗಿಂತ ಕಡಿಮೆ ದಪ್ಪದ 350 ಕೆ.ಜಿ ನಿಷೇತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು ಉತ್ಪಾದಕರಿಗೆ 20,000 ರೂ. ದಂಡ ವಿಧಿಸಿದರು.

ಪಿಎಸ್‍ಐ ನೇಮಕಾತಿ ಅಕ್ರಮ : ಅಮೃತ್‍ಪೌಲ್ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ

ನಂತರ, ಪೀಣ್ಯ ಇಂಡಸ್ಟ್ರಿಯಲ್ ಏರಿಯಾ ಮೊದಲನೇ ಹಂತ ಶೆಡ್ ಸಂ.211 ರಲ್ಲಿನ ಶ್ರೀರಾಮ್ ಪಾಲಿ ಪ್ಯಾಕ್ ಎಂಬ ಹೆಸರಿನಲ್ಲಿ ಪ್ಲಾಸ್ಟಿಕ್ ತಯಾರಿಕಾ ಘಟಕವು ಮುಂಬಾಗ ಬೀಗ ಹಾಕಿಕೊಂಡು ಪ್ಲಾಸ್ಟಿಕ್ ತಯಾರಿಕೆಯಲ್ಲಿ ತೊಡಗಿತ್ತು.

ಸದರಿ ಘಟಕದ ಪಕ್ಕದಿಂದ ಒಳಗೆ ಹೋಗಿ ಪರಿಶೀಲಿಸಿದಾದ 50 ಮೈಕ್ರಾನ್ ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ತಯಾರಿಸುವುದನ್ನು ಗಮನಿಸಿ ಸುಮಾರು 150 ಕೆ.ಜಿ ನಿಷೇದಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು 14,000 ರೂ. ದಂಡ ವಿಧಿಸಲಾಯಿತು.

ಎರಡೂ ಪ್ಲಾಸ್ಟಿಕ್ ತಯಾರಿಕಾ ಘಕಟಗಳಿಂದ ವಶಪಡಿಸಿಕೊಂಡ 500 ಕೆ.ಜಿ ನಿಷೇದಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ದೊಡ್ಡಬಿದಿರಕಲ್ಲು ಸಂಸ್ಕರಣ ಘಟಕಕ್ಕೆ ಕಳಿಸಲಾಯಿತು. ಜೊತೆಗೆ 50 ಮೈಕ್ರಾನ್ ಗಿಂದ ಕಡಿಮೆಯಿರುಚವವ ಪ್ಲಾಸ್ಟಿಕ್ ಉತ್ಪನ್ನಗಳನ್ನು ತಯಾರಿಸದಂತೆ ಮಾಲೀಕರಿಗೆ ಸೂಚನೆ ನೀಡಲಾಯಿತು.

ಗಡಿನಾಡು ಅಭಿವೃದ್ಧಿಗೆ ಅಧಿವೇಶನದಲ್ಲಿ ಮಹತ್ವದ ಘೋಷಣೆ ಸಾಧ್ಯತೆ

ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಮಾಡದಂತೆ ಜಾಗೃತಿ :ಬಿಬಿಎಂಪಿ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಗರದಾದ್ಯಂತ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಮಾರಾಟ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ಅನಿರೀಕ್ಷಿತ ತಪಾಸಣೆ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಜೊತೆಗೆ ದಂಡ ವಿಧಿಸಲಾಗುತ್ತಿದೆ.

ನಗರದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಯನ್ನು ಸಪೂರ್ಣವಾಗಿ ನಿಲ್ಲಿಸುವ ಕಾರ್ಯವನ್ನು ಪರಿಣಾಮ ಕಾರಿಯಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರದ ಅಧಿಸೂಚನೆ ಹಾಗೂ ಕೇಂದ್ರ ಸರ್ಕಾರದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ತಿದ್ದುಪಡಿ ನಿಯಮ 2021 ಪಾಲಿಕೆ ವ್ಯಾಪ್ತಿಯಲ್ಲಿ ಅಳವಡಿಸಿಕೊಳ್ಳಲಾಗಿದೆ.

ಚಿರತೆ ಸೆರೆಗೆ ವಿಶೇಷ ತಂಡ ರಚನೆ : ಮೃತರ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಣೆ

ವಲಯಮಟ್ಟದ ಟಾಸ್ಕ ಫೋರ್ಸ್ ಸಮಿತಿಯ ಸದಸ್ಯ ರಾಗಿ ಘನತ್ಯಾಜ್ಯ ವಿಭಾಗದ ಕಿರಿಯ ಆರೊಗ್ಯ ಪರಿವೀಕ್ಷಕರು ವಾರ್ಡ್ ಮಾರ್ಷಲ್ ರವರನ್ನು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದ್ದು, ಅದರಂತೆ ಪಾಲಿಕೆಯ ಘನತ್ಯಾಜ್ಯ ವಿಭಾಗದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಕಿರಿಯ ಆರೋಗ್ಯ ಪರಿವೀಕ್ಷಕರು, ಮಾರ್ಷಲ್‍ಗಳ ಮೇಲ್ವಿಚಾರಕರು ಹಾಗೂ ಮಾರ್ಷಲ್‍ಗಳ ತಂಡ ಹೋಟೆಲ್ ಉದ್ದಿಮೆ, ಪ್ಲಾಸ್ಟಿಕ್ ಉತ್ಪಾದಿಸುವ ಉದ್ದಿಮೆಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್ ಜಪ್ತಿ ಮಾಡುವುದರ ಜೊತೆಗೆ ದಂಡ ವಿಧಿಸುತ್ತಿವೆ. ಅಲ್ಲದೆ ಮತ್ತೊಮ್ಮೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ತಯಾರು ಮಾಡದಂತೆ ವ್ಯಾಪಾರಸ್ಥರು/ಮಾರಾಟಗಾರರು/ತಯಾರಕರು ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.

500kg plastic, seiz, 34thousand, fine, BBMP,

Articles You Might Like

Share This Article