ಬೆಂಗಳೂರು,ಡಿ.13- ಮಕ್ಕಳ ಕಲಿಕಾ ಕೊರತೆ ನೀಗಿಸಲು ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ರೂಪಿಸಿ ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಬೇಕು. ಫಲಿತಾಂಶವನ್ನು ಶಾಲಾವಾರು ಕ್ಲಸ್ಟರ್ ವಾರು,ತಾಲೂಕವಾರು ವಿಶ್ಲೇಷಿಸಬೇಕು ಎಂದು ಸೂಚಿಸಲಾಗಿದೆ.
ರಾಜ್ಯದಲ್ಲಿ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪಾಸ್ ಮಾಡಲಾಗುತ್ತಿತ್ತು. ಹೀಗಾಗಿ ಕಲಿಕೆ ಆಸಕ್ತಿ ಕಡಿಮೆಯಾಗಿದೆ. ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ.
ಇದೇ ಪರಿಸ್ಥಿತಿ ಮುಂದುವರೆದರೆ ಎಸ್ಸೆಸ್ಸೆಲ್ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್‍ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ಸಾದ್ಯತೆ ಇರುವ ಹಿನ್ನೆಲೆಯಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿದೆ.
ಸಂಸತ್‍ನಲ್ಲಿ ತವಾಂಗ್ ಗದ್ದಲ, ಖಡಕ್ ಉತ್ತರ ಕೊಟ್ಟ ರಾಜನಾಥ್ ಸಿಂಗ್
ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಯಾವ ರೀತಿ ಇದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಮಟ್ಟವೇನು? ಕೊರತೆಗಳೇನು? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ.
ಹೀಗಾಗಿ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಹಾಗೂ ಸಾಮಥ್ರ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಆದೇಶಿಸಿದೆ.
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ವಹಿಸಲಿದೆ. ರಾಜ್ಯ ಪಠ್ಯ ಕ್ರಮದ ವಿದ್ಯಾರ್ಥಿಗಳ ಕಲಿಕಾ ಸಾಧನೆ ಯಾವ ರೀತಿ ಇದೆ ಎಂಬುದನ್ನು ಅಳೆಯಲು ಈ ವಾರ್ಷಿಕ ಪರೀಕ್ಷೆ ಮಾಡಲಾಗುತ್ತಿದೆ.
ಖರ್ಗೆ ಹೆಸರಿಗಷ್ಟೇ ಕಾಂಗ್ರೆಸ್ ಅಧ್ಯಕ್ಷರು, ಈಗಲೂ ಜೀ ಹುಜೂರ್ ಸಂಸ್ಕೃತಿ ಇದೆ : ಬಿಜೆಪಿ ವ್ಯಂಗ್ಯ
ಪ್ರಯುಕ್ತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲ ಓ.ಖ.ಉ.ಅ. ಹಂತದಲ್ಲಿ ಪ್ರಶ್ನೆ ಪತ್ರಿಕೆ ರೂಪಿಸಿ, ಸರಬರಾಜು ಮಾಡಿ ಶಾಲಾ ಹಂತದಲ್ಲಿ ಪರೀಕ್ಷೆ ನಿರ್ವಹಿಸಿ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ಪ್ರಗತಿ ಕುಂಠಿತವಾಗಿರುವ ವಿಷಯವಾರು. ಶಾಲಾವಾರು, ಕ್ಲಸ್ಟರ್/ತಾಲ್ಲೂಕುವಾರು ವಿಶ್ಲೇಷಿಸಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅಗತ್ಯ ಕ್ರಿಯಾ ಯೋಜನೆಯನ್ನು ರಚಿಸಿ ಭೋಧನಾ-ಕಲಿಕಾ ಪ್ರಕ್ರಿಯೆಯನ್ನು ಬಲವರ್ಧನೆಗೊಳಸುವ ಉದ್ದೇಶ ಹೊಂದಿದೆ.
ಆದ್ದರಿಂದ ಸದರಿ ಪರೀಕ್ಷೆ ನಿರ್ವಹಣೆ ಕುರಿತು ಸಂಬಂಧಿಸಿದ ಅನುಷ್ಠಾನಾಕಾರಿಗಳೊಂದಿಗೆ ಸಭೆಗಳನ್ನು ನಡೆಸಿ, ಚರ್ಚಿಸಿ ನಿರ್ಣಯಿಸಿದಂತೆ ಪರೀಕ್ಷಾ ನಿರ್ವಹಣೆಗೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲು ಮಾರ್ಗಸೂಚಿ ಸಿದ್ಧಪಡಿಸಿ ಅನುಬಂದಿಸಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ತಂದೆಯನ್ನು ಕೊಂದು, 30 ತುಂಡುಗಳನ್ನಾಗಿ ತುಂಡರಿಸಿದ ಪಾಪಿ ಪುತ್ರ
ಪರೀಕ್ಷಾ ವ್ಯವಸ್ಥೆ ಹೇಗೆ?:
ರೂಪಣಾತ್ಮಕ ಪರೀಕ್ಷೆ ಮತ್ತು ಸಂಕಲನಾತ್ಮಕ ಪರೀಕ್ಷೆ ವಿಧಾನದಲ್ಲಿ ಪರೀಕ್ಷೆ ನಡೆಯಲಿದೆ. ಕ್ಲಸ್ಟರ್ ಹಂತದಲ್ಲಿ ಈ ಪರೀಕ್ಷೆಗಳನ್ನ ನಡೆಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಗೆ ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕ ಪಡೆಯುವಂತಿಲ್ಲ.
8ನೇ ತರಗತಿಗೆ ಒಂದು ಪರೀಕ್ಷಾ ಕೇಂದ್ರಕ್ಕೆ 50 ಮಕ್ಕಳು ಇರುವಂತೆ, 5ನೇ ತರಗತಿಗೆ 25 ಮಕ್ಕಳು ಒಂದು ಕೇಂದ್ರಕ್ಕೆ ಇರುವಂತೆ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಬೇಕು. ಮಕ್ಕಳ ಸಂಖ್ಯೆ ಕಡಿಮೆಯಿದ್ದರೆ 2 ಕಿಮೀ ವ್ಯಾಪ್ತಿಯ ಶಾಲೆಗಳನ್ನ ಒಳಪಡಿಸಿಕೊಳ್ಳುವುದು.
ಪರೀಕ್ಷಾ ಕೇಂದ್ರ ಸ್ಥಾಪನೆಗೆ ಡಯಟ್ ಪ್ರಾಂಶುಪಾಲರು, ಬಿಇಓಗಳು ಚರ್ಚಿಸಿ ನಿರ್ಧಾರ ಮಾಡಬೇಕು. ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಿಕ್ಷಕರನ್ನ ಅದಲು ಬದಲು ಮಾಡಬೇಕು. ಶಾಲಾ ಹಂತದಲ್ಲಿ ಪರೀಕ್ಷೆ ಪ್ರವೇಶ ಪತ್ರಗಳನ್ನ ಮುಖ್ಯಶಿಕ್ಷಕರು ವಿತರಿಸಬೇಕು.
ತಂದೆಯನ್ನು ಕೊಂದು, 30 ತುಂಡುಗಳನ್ನಾಗಿ ತುಂಡರಿಸಿದ ಪಾಪಿ ಪುತ್ರ
50 ಅಂಕಗಳ ಪರೀಕ್ಷೆ. 2 ಗಂಟೆ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು. 50 ಅಂಕದಲ್ಲಿ 40 ಅಂಕ ಲಿಖಿತ ಪರೀಕ್ಷೆ, 10 ಅಂಕ ಮೌಖಿಕ ಪರೀಕ್ಷೆ ನಡೆಸುವುದು. ಪ್ರಶ್ನೆ ಪತ್ರಿಕೆ ಮುದ್ರಣವನ್ನ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುದ್ರಿಸುತ್ತದೆ. ಜಿಲ್ಲಾ ಡಯಟ್ ಗಳಿಗೆ ಇದು ಹಂಚಿಕೆಯಾಗಲಿದೆ. ಇದರ ಉಸ್ತುವಾರಿ ಬಿಇಓ ಆಗಿರುತ್ತಾರೆ.
ಸಂಕಲನಾತ್ಮಕ ಮತ್ತು ರೂಪಣಾತ್ಮಕ ಸೇರಿ 100 ಅಂಕಗಳಿಗೆ ಪರೀಕ್ಷೆ ಇರಲಿದೆ. 35 ಅಂಕ ಪಡೆದ ವಿದ್ಯಾರ್ಥಿ ಪ್ರಗತಿ ಸಾಧಿಸಿರುವ ವಿದ್ಯಾರ್ಥಿ ಅಂತ ಘೋಷಣೆ ಮಾಡಲಾಗುತ್ತದೆ. ಕಡಿಮೆ ಅಂಕ ಪಡೆದ ವಿದ್ಯಾರ್ಥಿ ಫೇಲ್ ಮಾಡದೇ ಪ್ರಗತಿ ಸಾಧಿಸಬೇಕಾದ ವಿದ್ಯಾರ್ಥಿ ಅಂತ ಪರಿಗಣಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
5th and 8th class students, Public exam,